Featured

ಉಡುಪಿ : ಮುಂದಿನ ದಿನಗಳಲ್ಲಿ ಸಾರ್ವಜಿನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ : ಯಶ್ಪಾಲ್ ಸುವರ್ಣ – Vishwanews24

ಹಿಜಾಬ್ ಕುರಿತ 6 ಹೋರಾಟಗಾರ್ತಿಯರು ಭಯೋತ್ಪಾದಕರು..

ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಮುಂದಿನ ದಿನ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು..

ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ ಹಿಜಾಬನ್ನು ಹೊರಗಡೆ ಹಾಕದೇ ಇರೋ ಪರಿಸ್ಥಿತಿ ಬರುತ್ತೆ..

ಉಡುಪಿ : ಮುಂದಿನ ದಿನಗಳಲ್ಲಿ ಸಾರ್ವಜಿನಿಕ ಸ್ಥಳಗಳಲ್ಲಿಯೂ ಹಿಜಾಬ್ ಹಾಕಲು ಬಿಡುವುದಿಲ್ಲ ಎಂದು ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಅವರು ಹೇಳಿಕೆ ನೀಡಿದ್ದಾರೆ.

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಕಾರಣ ಪರೀಕ್ಷೆಯನ್ನು ತ್ಯಜಿಸಿ ವಾಪಾಸ್ಸಾದ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಹಿಜಾಬ್ ಕುರಿತ 6 ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಎಚ್ಚರಗೊಂಡಿದ್ದಾರೆ. ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಮುಂದಿನ ದಿನ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು. ಹಾಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ. ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ ಹಿಜಾಬನ್ನು ಹೊರಗಡೆ ಹಾಕದೇ ಇರೋ ಪರಿಸ್ಥಿತಿ ಬರುತ್ತೆ ಎಂದು ಹೇಳಿದ್ದಾರೆ.

ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರಿಗೆ ಈ ಹಿಂದೆಯೇ ಅನೇಕ ಬಾರಿ ಮನವರಿಕೆ ಮಾಡಿದ್ದೇವೆ , ಮುಸ್ಲಿಂ ಧಾರ್ಮಿಕ ಮುಖಂಡರೂ ಶಿಕ್ಷಣದ ಮಹತ್ವದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಆದರೆ ಇವರು ಬುದ್ದಿ ಕಲಿಯಲಿಲ್ಲ ಎಂದರೆ ನಾವೇನು ಮಾಡುವುದಕ್ಕೆ ಆಗುತ್ತೆ ಎಂದಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago