Featured

ಉಡುಪಿ : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ : ರೋಝಿ ಜೋನ್ – Vishwanews24

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ

ಎಲ್ಲರೂ ಹೋರಾಟ ನಡೆಸುವುದರ ಮೂಲಕ 40% ಸರಕಾರವನ್ನು ಕಿತ್ತೊಗೆಯಬೇಕಾಗಿದೆ..

ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ..

ಎಐಸಿಸಿ ಕಾರ್ಯದರ್ಶಿ ,ಮೈಸೂರು ಉಸ್ತುವಾರಿ, ಕೇರಳ ಶಾಸಕ ರೋಝಿ ಜೋನ್

ಉಡುಪಿ: ರಾಜ್ಯದಲ್ಲಿ ಆಡಳಿತ ನಡೆಸುವ 40% ಕಮೀಷನ್ ಸರಕಾರದಿಂದ ಜನರು ಬೇಸತ್ತಿದ್ದು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ, ಕೇರಳದ ಶಾಸಕರಾದ ರೋಝಿ ಜೋನ್ ಹೇಳಿದರು.

ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಠಾಚಾರದಲ್ಲಿ ಮುಳುಗಿದ್ದು ದೇಶದಲ್ಲಿಯೇ ಇತಿಹಾಸ ಸಾಧಿಸಿದೆ. ಜನರು ಬದಲಾವಣೆಯನ್ನು ಬಯಸಿದ್ದು, ಪ್ರಸ್ತುತ ಸರಕಾರದಿಂದ ಜನರು ಸಂಪೂರ್ಣ ತೊಂದರೆ ಅನುಭವಿಸುತ್ತಿದ್ದಾರೆ. ಸರಕಾರದ ಪ್ರತಿಯೊಬ್ಬ ಶಾಸಕರು ಹಣ ಮಾಡುವುದರಲ್ಲೇ ಮಗ್ನರಾಗಿದ್ದು, ರಾಹುಲ್ ಗಾಂಧಿಯವರು ನಡೆಸಿದ ಭಾರತ್ ಜೋಡೊ ಯಾತ್ರೆಯಲ್ಲಿ ಜನರು ಅಭೂತಪೂರ್ವವಾದ ಬೆಂಬಲ ಸೂಚಿಸಿದ್ದು ಮುಂದಿನ ಚುನಾವಣೆಗೆ ಇದು ಸಹಕಾರಿಯಾಗಲಿದೆ.

ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಳಿನ್‌ ಕುಮಾರ್‌ ಕಟೀಲ್‌ – Vishwanews24

ಕಾಂಗ್ರೆಸ್ ಪಕ್ಷ ಎಂದಿಗೂ ಕೂಡ ವಿಭಜನೆ ರಾಜಕೀಯಕ್ಕೆ ಬೆಂಬಲ ನೀಡುವುದಲ್ಲಿ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವುದರೊಂದಿಗೆ ಪ್ರತಿಯೊಬ್ಬರನ್ನು ಪ್ರೀತಿಸುವುದು ನಮ್ಮ ಉದ್ದೇಶ. ರಾಜ್ಯದ ಬಿಜೆಪಿ ಸರಕಾರ ಆಡಳಿತ ವಿರೋಧಿ ನೀತಿಯ ವಿರುದ್ದ ಎಲ್ಲರೂ ಹೋರಾಟ ನಡೆಸುವುದರ ಮೂಲಕ 40% ಸರಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದರು.

ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿಕೊಂಡು ಅದರ ಆಶಯದಂತೆ ನಡೆಯುತ್ತಿದ್ದು ರಾಹುಲ್ ಗಾಂಧಿಯವರ ಭಾರತ್ ಜೋಡೊ ಮೂಲಕ ಈಗಾಗಲೇ ಕೊಟ್ಯಾಂತರ ಜನರ ನಡುವೆ ನಾವು ಸಾಗಿದ್ದೇವೆ. ದೇಶದಾದ್ಯತಂತ ಒಡೆದ ಮನಸ್ಸುಗಳನ್ನು ಸೌಹಾರ್ದತೆಯ ಮೂಲಕ ಕಟ್ಟುವ ಕೆಲಸ ಮಾಡುತ್ತಿದ್ದು ಎಲ್ಲಾ ರಾಜ್ಯಗಳಲ್ಲಿ ಅತ್ಯುತ್ತಮವಾದ ಬೆಂಬಲ ಸಿಗುತ್ತಿದೆ ಎಂದರು.

ರಾಷ್ಟ್ರೀಯ ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ. ಹಲವು ದಶಕಗಳ ಬಳಿಕ ಕರ್ನಾಟಕದವರು ಅಧ್ಯಕ್ಷರಾಗಿದ್ದಾರೆ. ಬ್ಲಾಕ್ ಮಟ್ಟದ ಅಧ್ಯಕ್ಷರಾಗಿದ್ದವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ. ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಯುವಕ ನೇಣುಬಿಗಿದು ಆತ್ಮಹತ್ಯೆ – Vishwanews24

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎ ಗಫೂರ್, ಕೆಪಿಸಿಸಿ ಸಂಯೋಜಕರಾದ ಹಬೀಬ್ ಆಲಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ನಾಯಕರಾದ ಮಲ್ಯಾಡಿ ಶಿವರಾಮ್ ಶೆಟ್ಟಿ, ಸಂತೋಷ್ ಕುಲಾಲ್, ಅಣ್ಣಯ್ಯ ಕುಲಾಲ್, ಭಾಸ್ಕರ್ ರಾವ್ ಕಿದಿಯೂರು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago