ಉಡುಪಿ:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…