ಉಡುಪಿ: ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಮಂಗಳವಾರ ಈಜಲು ಹೋದ ಸಂಕೇತ್ (16), ಸೂರಜ್ (15 ), ಆಶಿಶ್ (14) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಬೆನ್ನಲ್ಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದಿರುವ ಸಚಿವರು, ಜಿಲ್ಲೆಯಲ್ಲಿ ಇಂಥ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…