Featured

ಉಡುಪಿ : ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಬೈಂದೂರು ಮೂಲದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ -Vishwanews24

ಉಡುಪಿ : ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಬೈಂದೂರು ಮೂಲದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ -Vishwanews24

ಉಡುಪಿ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

ರಾಘವೇಂದ್ರ ಎಮ್. ಅವರು ಬೈಂದೂರು ಬಾಡದ ನಿವೃತ್ತ ಮುಖ್ಯ ಶಿಕ್ಷಕರಾಗಿದ್ದ ದಿ. ನಾರಾಯಣ ಶೇರುಗಾರ್ ಹಾಗೂ ದಿ. ಜಯಲಕ್ಷ್ಮೀ ಅವರ ಪುತ್ರ. 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಅವರು ಭಡ್ತಿ ಹೊಂದಿ ಪ್ರಸ್ತುತ ಬೆಂಗಳೂರಿನ ಕೆ.ಎಲ್.ಎನಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.’

ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

11 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

20 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

20 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

20 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

20 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago