Featured

ಉಡುಪಿ: ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್ -Vishwanews24

ಉಡುಪಿ: ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್ -Vishwanews24

ಉಡುಪಿ: ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ

ಅಧಿಕಾರ ಸ್ವೀಕರಿಸಿದ ಮೊದಲ ಸಚಿವ ಸಂಪುಟದಲ್ಲಿ ತೆಗೆದುಕೊಂಡ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ಮಾಸಾಶನ ರೂ.1000ದಿಂದ ರೂ.1200ಕ್ಕೆ ಹೆಚ್ಚಳವಾಗಿದ್ದು, 35.98 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ. ಮಾಸಿಕ ವಿಧವಾ ವೇತನ ರೂ.600ರಿಂದ ರೂ.800ಕ್ಕೆ ಹೆಚ್ಚಳವಾಗಲಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ದಿವ್ಯಾಂಗರ ಮಾಸಿಕ ವೇತನ ರೂ.600 ಗಳಿಂದ ರೂ.800ಕ್ಕೆ ಹೆಚ್ಚಳವಾಗಳಿದ್ದು, 3.66 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ.

ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಬಡವರ, ದೀನದಲಿತರ, ರೈತರ ಮಕ್ಕಳ ಶ್ರೇಯೋಭಿವೃದ್ಧಿಯ ಚಿಂತನೆಯಿಂದ ಜಾರಿಗೆ ತರಲಿರುವ ವಿವಿಧ ಜನಕಲ್ಯಾಣ ಯೋಜನೆಗಳಿಗೆ ನಾಂದಿ ಹಾಡಿರುವುದು ಶ್ಲಾಘನೀಯ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

9 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

10 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

10 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

10 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

10 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

10 hours ago