Featured

ಉಡುಪಿ: ಮುಸುಕುಧಾರಿ ಕಳ್ಳರ ತಂಡದಿಂದ ಮನೆಗಳಿಗೆ ನುಗ್ಗಿ ಕಳವಿಗೆ ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ – vishwanews24

ಉಡುಪಿ: ಮುಸುಕುಧಾರಿ ಕಳ್ಳರ ತಂಡದಿಂದ ಮನೆಗಳಿಗೆ ನುಗ್ಗಿ ಕಳವಿಗೆ ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಿಕಟ್ಟೆ ಸಮೀಪ ಮುಸುಕುಧಾರಿ ಕಳ್ಳರ ತಂಡವೊಂದು ಮನೆಗಳಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮೂವರು ಮುಸುಕುಧಾರಿಗಳ ತಂಡವು ಕುಕ್ಕಿಕಟ್ಟೆ ಮುಚ್ಚಲಗೋಡು ಸಮೀಪದ ಸುಬ್ರಹ್ಮಣ್ಯ ನಗರದ ವಿಠಲ ಪೂಜಾರಿ ಎಂಬವರ ಮನೆಗೆ ನುಗ್ಗಿದ್ದು, ಅಲ್ಲಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಸೊತ್ತಿಗಾಗಿ ಹುಡುಕಾಟ ನಡೆಸಿದೆ. ಆದರೆ ಯಾವುದೇ ಸೊತ್ತುಗಳು ಸಿಗದ ಹಿನ್ನೆಲೆಯಲ್ಲಿ ಕಳ್ಳರು ಅಲ್ಲಿಂದ ತೆರಳಿದ್ದಾರೆ.

ಮುಂದೆ ಅಲ್ಲೇ ಸಮೀಪದ ಇನ್ನೊಂದು ಮನೆಗೆ ನುಗ್ಗಲು ಯತ್ನಿಸಿದಾಗ ಮನೆಯವರು ಎಚ್ಚರಗೊಂಡು ದೀಪ ಹಾಕಿದರು. ಈ ವೇಳೆ ಕಳ್ಳರ ತಂಡ ಅಲ್ಲಿಂದ ಪರಾರಿಯಾಗಿದೆ. ಪರಿಸರದ ಸಿಸಿಟಿವಿಯೊಂದರಲ್ಲಿ ಕಳ್ಳರು ರಸ್ತೆಯಲ್ಲಿ ಮನೆಗಳನ್ನು ಗುರುತಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡು ಬಂದಿವೆ.

ಮಾಹಿತಿ ತಿಳಿದು ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago