ಉಡುಪಿ : ಮೂಡುಬೆಳ್ಳೆಯಲ್ಲಿ ಶಿಲುಬೆ ಧ್ವಂಸಗೊಳಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು – vishwanews24
ಉಡುಪಿ : ಮೂಡುಬೆಳ್ಳೆಯಲ್ಲಿ ಶಿಲುಬೆ ಧ್ವಂಸ ಗೊಳಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು
ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ.
ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ. ಗುಡ್ಡದ ಮೇಲಿರುವ ಈ ಶಿಲುಬೆಯನ್ನು ಧ್ವಂಸ ಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದಕ್ಕಿಂತ 15 ದಿನಗಳ ಹಿಂದೆ ಇಲ್ಲಿ ಪ್ರಾರ್ಥನೆ ಸಲ್ಲಿಸಲಾಗಿತ್ತು.
ಮಣಿಪಾಲ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ; ವ್ಯಕ್ತಿ ಸ್ಥಳದಲ್ಲಿಯೇ ಮೃತ್ಯು – vishwanews24
ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ. ಫೆ.19 ರಂದು ಸ್ಥಳೀಯರು ಅಲ್ಲಿಗೆ ತೆರಳಿದಾಗ ದುಷ್ಕರ್ಮಿಗಳು ಶಿಲುಬೆಯನ್ನು ಮುರಿದು ಹಾನಿಗೊಳಿಸಿರುವುದು ಕಂಡುಬಂದಿದೆ. ಈ ಬಗ್ಗೆ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
