Featured

ಉಡುಪಿ: ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆದ ಕೆಎಂಸಿ ವೈದ್ಯರು…Vishwanews24

ಉಡುಪಿ: ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆದ ಕೆಎಂಸಿ ವೈದ್ಯರು…

ಉಡುಪಿ : ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದಾರೆ.

60 ವರ್ಷದ ಮಹಿಳೆ ಕಳೆದ 6 ವರ್ಷಗಳಿಂದ ಉರಿ ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದು ಮೂತ್ರನಾಳದ ಸೋಂಕಿಗೆ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಸಮಸ್ಯೆ ಉಲ್ಭಣಗೊಂಡು ಈಚೆಗೆ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿಗೆ ಸರಳ ಸಿ.ಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶವನ್ನು ಆವರಿಸಿಕೊಂಡಿರುವ ದೊಡ್ಡ ಕಲ್ಲು ಪತ್ತೆಯಾಯಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ ಪದ್ಮರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ 11.5 x 7.5 ಸೆಂ.ಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.

ಡಾ.ಅಂಶುಮನ್, ಡಾ.ಕಾಶಿ ವಿಶ್ವನಾಥ್, ಡಾ.ನಿಶಾ, ಡಾ.ವಿವೇಕ್ ಪೈ ಮತ್ತು ಡಾ.ಕೃಷ್ಣ ಅವರನ್ನೊಳಗೊಂಡ ತಂಡ ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಕಲ್ಲನ್ನು ಹೊರತೆಗೆದಿದ್ದು ರೋಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮಹಿಳಾ ರೋಗಿಯಲ್ಲಿ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲು ಪತ್ತೆಯಾಗಿರುವುದು ವಿಶ್ವದಲ್ಲಿ ಇದೇ ಮೊದಲು. ಹಿಂದೆ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ 528 ಗ್ರಾಂ ಮೂತ್ರಕೋಶದ ಕಲ್ಲು ಪತ್ತೆಯಾಗಿತ್ತು ಎಂದು ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡಕ್ಕೆ ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅಭಿನಂದಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago