ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

Featured, ಉಡುಪಿ

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ

ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ ASI ಚಂದ್ರ ಶೆಟ್ಟಿ ಅವರು ತಮ್ಮ ಸೇವೆಗೆ ಈ ಗೌರವ ಪಡೆದಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ AHC ಸಂತೋಷ್ ಶೆಟ್ಟಿ ಅವರು ಕರಾವಳಿ ಕಾವಲು ವಿಭಾಗದಲ್ಲಿ ನೀಡಿದ ವಿಶಿಷ್ಠ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ.

ಇದನ್ನೂ ಓದಿ:

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಇದೇ ರೀತಿ ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ RSI ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್ಪಿ ಹರಿರಾಮ್ ಶಂಕರ್ ಅವರು ಅಭಿನಂದಿಸಿದ್ದಾರೆ.

Leave a Reply