ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂವರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಾನೀಶ್ ಮದನಿ (23) ಮತ್ತು ಕಾವ್ರಾಡಿ ಗ್ರಾಮ ಕಂಡ್ಲೂರು ನಿವಾಸಿ ಕರಾಣಿ ಮುಸೀನ್(44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೂರು ಗ್ರಾಮದ ಚಂದ್ರನಗರದ ಜನತಾ ಕಾಲೋನಿಯ ಇಲಿಯಾಸ್(36) ಎಂಬವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಜೂ.24ರಂದು ಈ ಆದೇಶ ಹೊರಡಿಸಿದ್ದಾರೆ.
ದಾನೀಶ್ ಮದನಿ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.
ಗಡಿಪಾರು ಕ್ರಮಕ್ಕೆ ಒಳಗಾದ ಈ ಮೂವರು ಆರೋಪಿಗಳು, ಕೊಲೆ, ಕೊಲೆಯತ್ನ, ಪೊಲೀಸ್ ಠಾಣೆಗೆ ಕಲ್ಲೆಸೆತ, ಕಳವು, ಜಾನುವಾರು ಕಳವು, ಜಾನುವಾರು ಹತ್ಯೆ, ರೌಡಿಸಂ ಪ್ರವೃತ್ತಿಯ ಹಲ್ಲೆ ಮುಂತಾದ ಪ್ರಕರಣಗಳ ಸಹಿತ ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಾನೀಶ್ ಮದನಿನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ, ಕರಾಣಿ ಮುಸೀನ್ ನನ್ನು ಬೀದರ್ ಜಿಲ್ಲೆಯ ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಇಲಿಯಾಸ್‌ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ. ಈ ಅವಧಿಯಲ್ಲಿ ಮೂವರನ್ನು ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ, ನಾಲ್ವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗಿದೆ, 14 ಜನ ಸಾಮಾನ್ಯರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…