ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಡಿ.ಜೆ ಸೌಂಡ್ :ಪೊಲೀಸ್ ದಾಳಿ – Vishawanews24
ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್ :ಪೊಲೀಸ್ ದಾಳಿ
ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.
ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ಆರೋಪಿ ಶರತ್ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾಗಿ ಡಿಜೆ ಸೌಂಡ್ ಹಾಕಿಕೊಂಡು ರಾತ್ರಿ 2 ಗಂಟೆಯವರೆಗೆ ನೃತ್ಯ ಮಾಡುತ್ತಿದ್ದರು.
ಸುರತ್ಕಲ್: ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ ಪ್ರಕರಣ : ಮೂವರ ಬಂಧನ – Vishwanews24
ಈ ವೇಳೆ ಪೊಲೀಸರು 4 ಸೌಂಡ್ ಬಾಕ್ಸ್, ಡಿಜೆ ಪರಿಕರಗಳು, ಲೈಟಿಂಗ್ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
