Featured

ಉಡುಪಿ :  ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಡಿ.ಜೆ ಸೌಂಡ್‌  :ಪೊಲೀಸ್ ದಾಳಿ – Vishawanews24

ಉಡುಪಿ :  ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌  :ಪೊಲೀಸ್ ದಾಳಿ

ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.

ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ಆರೋಪಿ ಶರತ್‌ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾಗಿ ಡಿಜೆ ಸೌಂಡ್‌ ಹಾಕಿಕೊಂಡು ರಾತ್ರಿ 2 ಗಂಟೆಯವರೆಗೆ ನೃತ್ಯ ಮಾಡುತ್ತಿದ್ದರು.

ಈ ವೇಳೆ ಪೊಲೀಸರು 4 ಸೌಂಡ್‌ ಬಾಕ್ಸ್‌, ಡಿಜೆ ಪರಿಕರಗಳು, ಲೈಟಿಂಗ್‌ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

10 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago