ಉಡುಪಿ:ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮೋಸ ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೆ ಒಳಗಾದವರು ಮಣಿಪಾಲದ ಬಡಗಬೆಟ್ಟು ಗ್ರಾಮದ ಪ್ರಗತಿ ನಗರ ಪುಟ್ಟು ನಾಯ್ಕ. ಇವರು ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ 2,15,000ರೂ.ಗೆ ಜುಲೈ .5 ರಂದು ಪ್ರಶಾಂತ್ ನಾಯ್ಕ(45) ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಅಲ್ಲದೇ ಈ ಸಂಬಂಧ ಪ್ರಶಾಂತ್ ಮತ್ತು ಅವರ ಮಿತ್ರ ಎನ್.ರಾಘವ ನಾಯ್ಕ ಒಟ್ಟು 1.25ಲಕ್ಷ ರೂ. ಹಣ ನೀಡಿದ್ದರು ಎನ್ನಲಾಗಿದೆ. ಸೆ.4ರಂದು ಮೇಲ್ಚಾವಣಿ ಮಾಡಲು ಪ್ರಾರಂಭಿಸಿದ ಪ್ರಶಾಂತ್ ನಾಯ್ಕ 10 ದಿನಗಳೊಳಗೆ ಮಾಡಿ ಕೊಡುವುದಾಗಿ ಪೊಲೀಸ್ ಠಾಣೆಯಲ್ಲಿ ಲಿಖಿತವಾಗಿ ನೀಡಿದ್ದರು.
ಆದರೆ ಪುಟ್ಟು ನಾಯ್ಕ ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡದೇ, ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.
ಆರೋಪಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…