Featured

ಉಡುಪಿ: ಮೇ 28 ರಂದು ಗ್ರಾ.ಪಂ. ಉಪ ಚುನಾವಣೆಯ ಮತ ಎಣಿಕೆ : ನಿಷೇಧಾಜ್ಞೆ ಜಾರಿ – vishwanews24

ಉಡುಪಿ: ಮೇ 28 ರಂದು ಗ್ರಾ.ಪಂ. ಉಪ ಚುನಾವಣೆಯ ಮತ ಎಣಿಕೆ : ನಿಷೇಧಾಜ್ಞೆ ಜಾರಿ

     ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬ0ಧಿಸಿದ0ತೆ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಮೇ 28 ರಂದು ಉಡುಪಿ ತಾಲೂಕು ಕಚೇರಿ ಮತ್ತು ಕಾಪು ತಾಲೂಕು ಕಚೇರಿಯಲ್ಲಿ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಮೇ 28 ರ ಬೆಳಗ್ಗೆ 5 ಗಂಟೆಯಿAದ ಮತ ಎಣಿಕೆ ಕಾರ್ಯವು ಮುಕ್ತಾಯವಾಗುವವರೆಗೆ ಮೇಲ್ಕಂಡ ತಾಲೂಕು ಕಚೇರಿಗಳ ಮತ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. 

     ಈ ಸಂದರ್ಭದಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ಅಥವಾ ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

   ಮತ ಎಣಿಕೆ ಕೇಂದ್ರದ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. 

   ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. 

   ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಣ್ಣೆ, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕ್ಷಾರಕ ಯಾ ಸ್ಫೋಟಕ ವಸ್ತುಗಳು/ಪಟಾಕಿ/ಸಿಡಿಮದ್ದು ಹೊಂದುವುದನ್ನು ನಿಷೇದಿಸಲಾಗಿದೆ.

    ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಯಾ ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇದಿಸಲಾಗಿದೆ. 

    ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

    ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬAದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago