ಉಡುಪಿ: ಮೇ 4ರವರೆಗೆ ದೇವಸ್ಥಾನ, ಚರ್ಚ್, ಮಸೀದಿ ಬಂದ್ : ಜಿಲ್ಲಾಧಿಕಾರಿ -Vishwanews24

Featured, ಉಡುಪಿ

ಉಡುಪಿ: ಮೇ 4ರವರೆಗೆ ದೇವಸ್ಥಾನ, ಚರ್ಚ್, ಮಸೀದಿ ಬಂದ್ : ಜಿಲ್ಲಾಧಿಕಾರಿ -Vishwanews24

ಉಡುಪಿ : ಕೊವಿಡ್ -19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಮೇ4 ರವರೆಗೆ ಕರೋನ ನೈಟ್ ಕರ್ಪ್ಯೂ ಮತ್ತು ವಾರಂತ್ಯ ಕರ್ಪ್ಯೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿ ಗೊಳಿಸಿದ್ದು, ಅದರಂತೆ ಮಸೀದಿ, ದೇವಸ್ಥಾನ, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಸಾರ್ವಜನಿಕರಿಗೆ ಮುಂದಿನ ಆದೇಶವರೆಗೆ ಮುಚ್ಚಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗಳು ಯಾವುದೇ ಸಂದರ್ಶಕರನ್ನು ಒಳಗೊಳ್ಳದೆ ತಮ್ಮ ಆಚರಣೆ ಗಳನ್ನು ಮತ್ತು ಕರ್ತವ್ಯಗಳನ್ನು ನಿರ್ವಹಿಸಬಹುದಾಗಿದೆ. ಅಲ್ಲದೆ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ : ಸಿದ್ದರಾಮಯ್ಯ -Vishwanews24