Featured

ಉಡುಪಿ: ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿದೆ : ವೆರೋನಿಕಾ ಕರ್ನೆಲಿಯೊ – Vishwanews24

ಉಡುಪಿ: ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿದೆ : ವೆರೋನಿಕಾ ಕರ್ನೆಲಿಯೊ

ಉಡುಪಿ: ಮತ್ತೊಮ್ಮೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುವುದರ ಮೂಲಕ ಗೃಹಿಣಿಯರ ಕಣ್ಣಲ್ಲಿ ನೀರು ತರಿಸುವಂತಹ ಪಾಪದ ಕೆಲಸವನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಡಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿಯವರ ಅಚ್ಚೇ ದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿ ಹೋಗಿದೆ. ಈಗ ಮತ್ತೊಮ್ಮೆ 50 ರೂ ಹೆಚ್ಚಳ ಮಾಡುವುದರ ಮೂಲಕ ಚುನಾವಣೆಯ ಸಮಯದಲ್ಲಿ ಮತ್ತೆ ರೂ 25 ಕಡಿಮೆ ಮಾಡುವ ನಾಟಕ ಮಾಡುತ್ತಾರೆ. ಕೇಂದ್ರದ ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಂಪರ್ಕ ಪಡೆದಿದ್ದ ಬಡಪಾಯಿ ಬಡವರು ಅದರಲ್ಲೂ ಕೂಲಿ ಕಾರ್ಮಿಕ, ಬಡ ಹಾಗೂ ಮಾಧ್ಯಮ ವರ್ಗದ ಮಹಿಳೆಯರು ಗ್ಯಾಸ್ ಬೆಲೆಯೇರಿಕೆಯ ಶಾಕ್ ಗೆ ತತ್ತರಿಸಿ ಹೋಗಿದ್ದಾರೆ. ಸೌದೆ ಬಿಟ್ಟು ಸಿಲಿಂಡರ್ ಮೊರೆ ಹೋಗಿದ್ದ ಮಹಿಳೆಯರಿಗೆ ದರ ಏರಿಕೆಯಿಂದ ಹಳೆ ಗಂಡನ ಪಾದವೇ ಗತಿ ಎಂಬಂತೆ ಸೌದೆಯೇ ಆಸರೆಯಾಗುತ್ತಿದೆ.

ಹಿಂದೆ ಯುಪಿಎ ಸರ್ಕಾರವಿದ್ದಾಗ ಗ್ಯಾಸ್ ಗೆ ಸಬ್ಸಿಡಿ ದೊರೆಯುತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಏರಿಳಿತವಾದರೂ ಅದರ ಬಿಸಿ ಗ್ರಾಹಕರಿಗೆ ತಟ್ಟದಂತೆ ಯುಪಿಎ ಸರ್ಕಾರ ನೋಡಿಕೊಂಡಿತ್ತು. ಆದರೆ ಮೋದಿ ಸರ್ಕಾರ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಸುಳಿವೇ ಕೊಡದೆ ರದ್ದು ಮಾಡಿದೆ. ಬಡವರು ಬದುಕಬಾರದು ಬದಲಾಗಿ ಅದಾನಿ ಅಂಬಾನಿಯಂತಹ ಉದ್ಯಮಿಗಳು ಮಾತ್ರ ಬದುಕಬೇಕು ಎನ್ನುವುದು ಮೋದಿ ಸರ್ಕಾರದ ಉದ್ದೇಶವಾಗಿದೆ.

ಜತೆಗೆ ರಾಜ್ಯದಲ್ಲಿ ಜನರ ಗಮನವನ್ನು ಈ ಜ್ವಲಂತ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಕೂಡಲೇ ಕೇಂದ್ರ ಸರಕಾರ ಏರಿಕೆ ಮಾಡಿರುವ ಗ್ಯಾಸ್ ಬೆಲೆಯನ್ನು ಇಳಿಸುವಂತೆ ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

10 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago