Featured

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ – vishwanews24

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76)  ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಪ್ರಸಾದನ ತಜ್ಞರೂ ಆಗಿರುವ ಬಾಲಕೃಷ್ಣ ನಾಯಕ್ ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದ್ರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು.

ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕ್‍ರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ. ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಗೌರವಿಸಲಾಗಿತ್ತು.

ಉಡುಪಿಯ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗುವಲ್ಲಿ ಬಾಲಕೃಷ್ಣ ನಾಯಕ್‍ರ ಕೊಡುಗೆ ಮಹತ್ತರವಾದುದು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀರ್ವ ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

4 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

13 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago