Featured

ಉಡುಪಿ : ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥ ಆಯ್ಕೆ ಸರಿಯಾದುದ್ದಲ್ಲ : ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ – Vishwanews24

ಉಡುಪಿ : ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥ ಆಯ್ಕೆ ಸರಿಯಾದುದ್ದಲ್ಲ : ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ

ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನಕ್ಕೆ ವಿಶಿಷ್ಟವಾದ ಸಾಂಸ್ಕೃತಿಕ ಪರಂಪರೆಯಿದೆ.ಅದನ್ನು ನೆನಪಿಸುವ ಮತ್ತು ಭವಿಷ್ಯಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಉಡುಪಿಯಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ಸಮ್ಮೇಳನ ಆಯೋಜನೆ ಅಭಿನಂದನಾರ್ಹವಾದುದು.ಆದರೆ ಇಂತಹ ಪ್ರತಿಷ್ಠಿತ ಕಾರ್ಯಕ್ರಮದ ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರವರನ್ನು ಆಹ್ವಾನಿಸಿರುವುದು ಆಶ್ಚರ್ಯಕರವಾಗಿದೆ.ರೋಹಿತ್‌ರವರು ಪಠ್ಯಪುಸ್ತಕ ಸಮಿತಿಯಲ್ಲಿದ್ದಾಗ ಸುಧಾರಣಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ತೆಗೆದು ಹಾಕುವಂತಹ ದುಸ್ಸಾಹಸ ಮಾಡಿದವರು.ಇಂದಿಗೂ ಈ ವಿಷಯ ಸಮರ್ಪಕವಾಗಿ ಬಗೆಹರಿದಿಲ್ಲ.ಅಲ್ಲದೆ ರಾಷ್ಟ್ರ ಕವಿ ಕುವೆಂಪು ವಿರಚಿತ ನಾಡಗೀತೆಗೂ ಅವಮಾನ ಮಾಡಿದ್ದರು.ಇಷ್ಟೆಲ್ಲಾ ವಿವಾದಿತ ವ್ಯಕ್ತಿಯಾಗಿ ಹಾಗೂ ಯಕ್ಷಗಾನದಲ್ಲೂ ಏನೇನೂ ಸಾಧನೆ ಮಾಡಿಲ್ಲದ ರೋಹಿತ್ ಆಯ್ಕೆ ಯಾವ ಮಾನದಂಡದಲ್ಲಿ ಆಗಿದೆ ಎಂಬುದು ತಿಳಿಯುತ್ತಿಲ್ಲ.ಯಕ್ಷಗಾನದಲ್ಲಿ ಅವಿರತ ಸಾಧನೆ ಮಾಡಿದ ಕಲಾದಿಗ್ಗಜರು,ಯಕ್ಷ ವಿದ್ವಾಂಸರು ನಮ್ಮಲ್ಲಿರುವಾಗ ರೋಹಿತ್ ಆಹ್ವಾನವನ್ನು ತಿರಸ್ಕರಿಸುವುದು ಒಳ್ಳೆಯದು ಎಂದು ನಮ್ಮ ಅಭಿಪ್ರಾಯವಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 minute ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

14 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

20 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

49 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

1 hour ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago