ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನಕ್ಕೆ ವಿಶಿಷ್ಟವಾದ ಸಾಂಸ್ಕೃತಿಕ ಪರಂಪರೆಯಿದೆ.ಅದನ್ನು ನೆನಪಿಸುವ ಮತ್ತು ಭವಿಷ್ಯಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಉಡುಪಿಯಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ಸಮ್ಮೇಳನ ಆಯೋಜನೆ ಅಭಿನಂದನಾರ್ಹವಾದುದು.ಆದರೆ ಇಂತಹ ಪ್ರತಿಷ್ಠಿತ ಕಾರ್ಯಕ್ರಮದ ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರವರನ್ನು ಆಹ್ವಾನಿಸಿರುವುದು ಆಶ್ಚರ್ಯಕರವಾಗಿದೆ.ರೋಹಿತ್‌ರವರು ಪಠ್ಯಪುಸ್ತಕ ಸಮಿತಿಯಲ್ಲಿದ್ದಾಗ ಸುಧಾರಣಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ತೆಗೆದು ಹಾಕುವಂತಹ ದುಸ್ಸಾಹಸ ಮಾಡಿದವರು.ಇಂದಿಗೂ ಈ ವಿಷಯ ಸಮರ್ಪಕವಾಗಿ ಬಗೆಹರಿದಿಲ್ಲ.ಅಲ್ಲದೆ ರಾಷ್ಟ್ರ ಕವಿ ಕುವೆಂಪು ವಿರಚಿತ ನಾಡಗೀತೆಗೂ ಅವಮಾನ ಮಾಡಿದ್ದರು.ಇಷ್ಟೆಲ್ಲಾ ವಿವಾದಿತ ವ್ಯಕ್ತಿಯಾಗಿ ಹಾಗೂ ಯಕ್ಷಗಾನದಲ್ಲೂ ಏನೇನೂ ಸಾಧನೆ ಮಾಡಿಲ್ಲದ ರೋಹಿತ್ ಆಯ್ಕೆ ಯಾವ ಮಾನದಂಡದಲ್ಲಿ ಆಗಿದೆ ಎಂಬುದು ತಿಳಿಯುತ್ತಿಲ್ಲ.ಯಕ್ಷಗಾನದಲ್ಲಿ ಅವಿರತ ಸಾಧನೆ ಮಾಡಿದ ಕಲಾದಿಗ್ಗಜರು,ಯಕ್ಷ ವಿದ್ವಾಂಸರು ನಮ್ಮಲ್ಲಿರುವಾಗ ರೋಹಿತ್ ಆಹ್ವಾನವನ್ನು ತಿರಸ್ಕರಿಸುವುದು ಒಳ್ಳೆಯದು ಎಂದು ನಮ್ಮ ಅಭಿಪ್ರಾಯವಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…