Featured

ಉಡುಪಿ : ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಿ :ಸಚಿವ ಸುನೀಲ್ ಕುಮಾರ್ – Vishwanews24

ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಿ :ಸಚಿವ ಸುನೀಲ್ ಕುಮಾರ್

   ಉಡುಪಿ,: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯುವ ರಾಜ್ಯಮಟ್ಟದ ಯಕ್ಷಗಾನ ಸಮ್ಮೆಳನಕ್ಕೆ ಆಗಮಿಸುವ  ಕಲಾವಿದರು ಮತ್ತು ಕಲಾಸಕ್ತರು ಹಾಗೂ ಸಾರ್ವಜನಿಕರಿಗೆ  ಯಾವುದೇ ರೀತಿಯ  ಕೊರತೆ ಆಗದಂತೆ ಅಗತ್ಯ ಮೂಲ ಸೌಕರ್ಯಗಳು ಸೇರಿದಂತೆ , ಊಟೋಪಚಾರದ ವ್ಯವಸ್ಥೆಯನ್ನು ಮಾಡಬೇಕೆಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅಧಿಕಾರಿಗಳು ಹಾಗೂ ಸಂಘಟಕರಿಗೆ ಸೂಚನೆ ನೀಡಿದರು.

ಅವರು ಇಂದು ರಾಜ್ಯಮಟ್ಟದ ಯಕ್ಷಗನ ಸಮ್ಮೇಳನ ಸಿದ್ಧತೆಗಳ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿವಿಧ ಗೋಷ್ಠಿಗಳು ಹಾಗೂ ಸಂವಾದಗಳು ನಿಗಧಿತ ಸಮಯಕ್ಕೆ ಸರಿಯಾಗಿ ಅರ್ಥಪೂರ್ಣವಾಗಿ ಆಯೋಜಿಸಬೇಕು. ಯಕ್ಷಗಾನ ಸಮ್ಮೇಳನಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಆಗಮಿಸುವ ಯಕ್ಷಗಾನ ಕಲಾವಿದರು, ಕಲಾಭಿಮಾನಿಗಳು, ಜನಸಾಮಾನ್ಯರು ಸೇರಿದಂತೆ 50000 ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಆಗಮಿಸುವ ಪ್ರತಿಯೊಬ್ಬರಿಗೂ  ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಆಸನದ ವ್ಯವಸ್ಥೆ , ಆಹಾರ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಬAದಿಸಿದ ಆಹ್ವಾನ ಪತ್ರಿಕೆಯನ್ನು ಶಿಷ್ಠಾಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಹಾಗೂ ಕರಾವಳಿ ಭಾಗದ 3 ಜಿಲ್ಲೆಯ ಎಲ್ಲಾ ಶಾಸಕರು , ಲೋಕಸಭಾ ಸದಸ್ಯರು, ಯಕ್ಷಗಾನ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದರಿಗೆ, ಗಣ್ಯರಿಗೆ ತಲುಪಿಸಿ ಆಹ್ವಾನಿಸಬೇಕೆಂದರು.

ಸಮಾರಂಭದಲ್ಲಿ 75 ಕ್ಕೂ ಹೆಚ್ಚು ಜನ ಆಯ್ದ ಕಲಾವಿದರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದ್ದು, ಹೊರಜಿಲ್ಲೆಯಿಂದ ಬಂದ ಇವರಿಗೂ ಸೇರಿದಂತೆ ಇತರೆ ಕಲಾವಿದರಿಗೆ ವಸತಿ ಸೇರಿದಂತೆ ಆತಿಥ್ಯ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಕಾರ್ಯಕ್ರಮದ ವೇದಿಕೆಯ ಪೆಂಡಾಲ್ ನಲ್ಲಿ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿ ಇರುವ ಹಾಗೆ ನೋಡಿಕೊಳ್ಳಬೇಕು, ಮೈದಾನದಲ್ಲಿಯೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡÀಬೇಕು, ಎಲ್ಲವೂ ಅಚ್ಚುಕಟ್ಟಾಗಿ ನಡೆಯಲು ಸ್ವಯಂ ಸೇವಕರನ್ನು ನಿಯೋಜಿಸಬೇಕೆಂದು ತಿಳಿಸಿದರು.

ಮೈದಾನದಲ್ಲಿ 100 ಕ್ಕೂ ಹೆಚ್ಚು ವಾಣಿಜ್ಯ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ಪ್ರದರ್ಶನ ಮಳಿಗೆಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಸಮ್ಮೇಳನಕ್ಕೆ ಆಗಮಿಸುವ ವಾಹನಗಳ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಬೇಕೆಂದರು.

ಸಮ್ಮಳನಕ್ಕೆ ಆಗಮಿಸುವ ಜನಸಾಮಾನ್ಯರು ಇಲ್ಲಿನ ಸುತ್ತಮುತ್ತಲಿನ ಪ್ರವಾಸಿತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ರವಾಸಿತಾಣಗಳ ಮಾರ್ಗಸೂಚಿಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮ್ಮೇಳನಕ್ಕೆ ಆಗಮಿಸುವ ಸರ್ವರಿಗೂ ಲಭ್ಯವಾಗುವಂತೆ ಕಾಪಿ, ತಿಂಡಿ, ಊಟೋಪಚಾರ ನಿರಂತರವಾಗಿ ಬೆಳಗ್ಗೆಯಿಂದ ರಾತ್ರಿಯವರೆಗೂ ನಡೆಯಲಿದ್ದು ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರ ಯಕ್ಷಗಾನ ಸಮ್ಮೇಳನ ನಡೆಸಲು ಕಳೆದ ಆಯವ್ಯಯದಲ್ಲಿ ಘೋಷಿಸುವುದರೊಂದಿಗೆ ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಲು ಅವಕಾಶ ಮಾಡಿಕೊಟ್ಟಿದೆ ಇದನ್ನು ಮಾದರಿ  ಸಮ್ಮೇಳನವಾಗುವ ರೀತಿಯಲ್ಲಿ ನಡೆಸಲು ಅಧಿಕಾರಿಗಳು, ಸಂಘಟಕರು , ಯಕ್ಷಗಾನ ಕಲಾವಿದರು ಹಾಗೂ ಆಸಕ್ತರು ಎಲ್ಲಾ ರೀತಿಯ ನೆರವು ಹಾಗೂ ಸಹಕಾರ ನೀಡಬೇಕೆಂದರು.

ಸಮ್ಮೇಳನವನ್ನು ವಿಶೇಷವಾಗಿ ಯುವ ಜನರಲ್ಲಿ ಕಲಾ ಆಸಕ್ತಿ ತರಬೇಕೆಂಬ ಉದ್ದೇಶದಿದಂಲೇ ಆಯೋಜಿಸಲಾಗುತ್ತಿದ್ದು, ಯುವಜನರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಮ್ಮೇಳನದ ಧ್ವಜವನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಪ್ರಸನ್ನ ಹೆಚ್. ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಯಕ್ಷಗಾನ ಅಕಾಡೆಮಿಯ ಆಡಳಿತಾಧಿಕಾರಿ ಅಶೋಕ್ ಎನ್ ಛಲವಾದಿ, ರಿಜಿಸ್ಟಾçರ್ ಶಿವರುದ್ರಪ್ಪ, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ಧನಂಜಯ ಶೆಟ್ಟಿ, ಪ್ರೊ.ಎಂ.ಎಲ್.ಸಾಮಗ, ನಾರಾಯಣ ಎಂ ಹೆಗಡೆ, ಮಹಾವೀರ ಪಂಡಿ, ಸುರೇಂದ್ರ ಪಣಿಯೂರು, ಪೌರಾಯುಕ್ತ ಡಾ.ಉದಯ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

4 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago