Featured

ಉಡುಪಿ : ಯಶ್ಪಾಲ್‌‌ ಜೆಲ್ಲೆಯ ಹಿಂದೂ ಸಂಘಟನೆಯ ಜನಪ್ರಿಯ ನಾಯಕ : ರಘುಪತಿ ಭಟ್ – Vishwanews24

ಹಿಂದುತ್ವದ ಆಧಾರದಲ್ಲಿ ಯಶ್ಪಾಲ್‌‌  ರಾಜಕೀಯಕ್ಕೆ ಪ್ರವೇಶ   : ರಘುಪತಿ ಭಟ್

ಉಡುಪಿ: ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಯಶ್ಪಾಲ್ ಸುವರ್ಣ ರವರು ಹಿಂದುತ್ವದ ಆಧಾರದಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದು ಜೆಲ್ಲೆಯ ಹಿಂದೂ ಸಂಘಟನೆಯ ಜನಪ್ರಿಯ ನಾಯಕರಾಗಿದ್ದಾರೆ. ಎರಡು ಬಾರಿ ನಗರ ಸಭೆಯ ಸದಸ್ಯರಾಗಿ ಸಾರ್ವಜನಿಕ ಜೀವನದ ವಿಶೇಷ ಅನುಭವಗಳನ್ನು ಹೊಂದಿದ್ದಾರೆ ಎಂದು ಶಾಸಕರಾದ ರಘುಪತಿ ಭಟ್ ಹೇಳಿದರು.

ಅವರು ಪರ್ಕಳದಲ್ಲಿ ಹೆರ್ಗ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಸಾಮಾಜಿಕ ನೆಲೆಯಲ್ಲಿ ಉಭಯ ಜಿಲ್ಲೆಗಳ ಮೀನುಗಾರಿಕಾ ಫೆಡರೇಷನ್ ನ ಎರಡು ಅವಧಿಗೆ ಅಧ್ಯಕ್ಷರಾಗಿ ನಷ್ಟ ದಲ್ಲಿದ್ದ ಸಂಸ್ಥೆಯನ್ನು ಲಾಭದಲ್ಲಿ ತಂದು ನಿಲ್ಲಿಸಿದ್ದಾರೆ. ಮುಚ್ಚುವಂತಹ ಸ್ಥಿತಿಯಲ್ಲಿದ್ದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿ ಅದನ್ನು ಪುನಶ್ಚೇತನಗೊಳಿಸಿ ಈಗ ಕೋಟ್ಯಾಂತರ ರೂಪಾಯಿಗಳ ಲಾಭದಲ್ಲಿ ನಡೆಯುವಂತೆ ಮಾಡಿದ್ದಲ್ಲದೆ ಮೀನುಗಾರರಿಗೆ ಈ ಸಂಸ್ಥೆಯ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅವರು ಹಿಂದುತ್ವ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯ ಆಧಾರದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಸಮರ್ಥ ಅಭ್ಯರ್ಥಿಯಾಗಿ ಅತಿ ಹೆಚ್ಚು ಮತಗಳಿಂದ ವಿಜಯಿಯಾಗಲಿದ್ದಾರೆ ಎಂದು ಅವರು ಹೇಳಿದರು.

ನಗರ ಬಿ.ಜೆ.ಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕ್ಷೇತ್ರ ಪ್ರಭಾರಿಗಳಾದ ಗಣೇಶ್ ಹೊಸಬೆಟ್ಟು,ನಗರ ಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಮಾಜಿ ಅಧ್ಯಕ್ಷರಾದ ದಿನಕರ್ ಶೆಟ್ಟಿ, ಕಿರಣ್ ಕುಮಾರ್, ನಗರ ಸಭಾ ಸದಸ್ಯರಾದ ಅಶ್ವಿನಿ ಪೂಜಾರಿ, ವಿಜಯಲಕ್ಷ್ಮೀ, ಕಲ್ಪನಾ ಸುಧಾಮ, ನಗರ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಮಹಾಶಕ್ತಿ ಕೇಂದ್ರದ ಸಂಚಾಲಕರಾದ ಹೇಮಂತ್ ಪರ್ಕಳ, ಶಿವಾನಂದ ಕಾಮತ್ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago