ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ಮಹಮ್ಮದ್ ಶಾಫಿ (26)ಗೆ ಉಡುಪಿ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆ ಗೊಳಿಸಿದೆ.
ಯಶ್ಪಾಲ್ ಸುವರ್ಣ ಹತ್ಯೆಗೈದವರಿಗೆ 10 ಲಕ್ಷ ರೂ ನೀಡುವುದಾಗಿ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವುದಾಗಿ ಕಾಪು ವಿಧಾನಸಭಾ ಕ್ಷೇತ್ರದ ಯುವಮೋರ್ಚಾದ ಅಧ್ಯಕ್ಷ ಉದ್ಯಾವರದ ಸಚಿನ್ ಸುವರ್ಣ ಜೂನ್ 8 ರಂದು ಕಾಪು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕರಾವಳಿ ಹಾಗೂ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾದ ಈ ಪ್ರಕರಣ ದಾಖಲಾದ ತಕ್ಷಣ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಅವರು ಉಡುಪಿ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಂಜುನಾಥ್ ಇವರ ತಂಡ ಮಂಗಳೂರು ಬಜ್ಪೆಯ ಮಹಮ್ಮದ್ ಶಫಿ ಪತ್ತೆ ಹಚ್ಚಿದ್ದರು. ನಂತರ ಕಾಪು ಪೋಲೀಸರ ವಿಶೇಷ ತಂಡ ಜೂನ್ 18 ರಂದು ಆರೋಪಿಯನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ತಲಾ 2 ಜಾಮೀನು ಮತ್ತು ರೂ 50 ಸಾವಿರ ಬಾಂಡ್ ನ ಶರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಆರೋಪಿ ಪರವಾಗಿ ಯುವ ವಕೀಲ ಅಸದುಲ್ಲಾ ಕಟಪಾಡಿ ವಾದಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…