ಉಡುಪಿ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್ ಸಮ್ಮಿಟ್ 2024 ಸಮಾರಂಭದಲ್ಲಿ ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ನೀಡುವ ರಾಷ್ಟ್ರ ಮಟ್ಟದ ಪ್ರತಿಷ್ಟಿತ ಭಾರತ್ ರತ್ನ ಸಹಕಾರಿತ ಸನ್ಮಾನ್ 2024 ಬೆಸ್ಟ್ ಯಂಗ್ ಲೀಡರ್ ಪ್ರಶಸ್ತಿಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಸ್ವೀಕರಿಸಿದರು.
ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಟ ಫೆಡರೇಷನ್ ನಿ. ಮಂಗಳೂರು ಇದರ ಅಧ್ಯಕ್ಷರಾಗಿರುವ ಯಶ್ ಪಾಲ್ ಸುವರ್ಣ ತಮ್ಮ ಅಧ್ಯಕ್ಷತೆಯಲ್ಲಿ ಎರಡು ಸಂಸ್ಥೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿ ನಿರಂತರ ಲಾಭದಾಯಕ ಸಂಸ್ಥೆಯನ್ನಾಗಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.
ಈಗಾಗಲೇ ಸಹಕಾರ ಕ್ಷೇತ್ರದ ಸರ್ವಾಂಗೀಣ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಸಹಕಾರ ಇಲಾಖೆಯ 2022ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಯಶ್ ಪಾಲ್ ಸುವರ್ಣ ರವರು ತಮ್ಮ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕಿಗೆ ಹಲವಾರು ರಾಷ್ಟ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದು ಕೊಂಡಿದ್ದಾರೆ.
ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸರಕಾರದ ಮಾಹಿತಿ ಹಾಗೂ ಸಂವಹನ ಇಲಾಖೆಯ ಜಂಟಿ ಕಾರ್ಯದರ್ಶಿ ಶ್ರೀ ಸುಮ್ನೇಶ್ ಜೋಷಿ ಯವರು ಯಶ್ ಪಾಲ್ ಸುವರ್ಣ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…