ಉಡುಪಿ: ಮಲ್ಪೆ ವಡಭಾಂಡೇಶ್ವರ ವಾರ್ಡಿನ ಅರ್ಹ ಬಡ ಕುಟುಂಬಕ್ಕೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ “ಪುಷ್ಪಾನಂದ” ಮನೆಯನ್ನು ಪೇಜಾವರ ಮಠದ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಜನವರಿ 31 ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಹಸ್ತಾಂತರಿಸಲಿದ್ದಾರೆ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಶುಭ ಸಂದರ್ಭದಲ್ಲಿ ಪೇಜಾವರ ಶ್ರೀಗಳ ರಾಮ ರಾಜ್ಯ ನಿರ್ಮಾಣದ ಸಂಕಲ್ಪಕ್ಕೆ ಪೂರಕವಾಗಿ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಆಶಯದಂತೆ ಶ್ರೀಗಳ ಮಾರ್ಗದರ್ಶನದಲ್ಲಿ ಹೆತ್ತವರ ಸ್ಮರಣಾರ್ಥವಾಗಿ ಶ್ರೀರಾಮ ನವಮಿಯಂದು ಮನೆಗೆ ಶಿಲಾನ್ಯಾಸ ನೆರವೇರಿಸಿದ್ದು ಇದೀಗ ನೂತನ ಮನೆಯನ್ನು ಪೇಜಾವರ ಶ್ರೀಗಳೇ ಹಸ್ತಾಂತರಿಸಲಿದ್ದಾರೆ.
ಪುಷ್ಪಾನಂದ ಫೌಂಡೇಶನ್ ಮೂಲಕ ಶಿಕ್ಷಣ, ಸಾಮಾಜಿಕ, ಆರೋಗ್ಯ, ಧಾರ್ಮಿಕ ಕ್ಷೇತ್ರದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಡ ಕುಟುಂಬಗಳಿಗೆ ಶಕ್ತಿ ತುಂಬುವ ಕೆಲಸ ನಿರಂತರವಾಗಿ ನಡೆಸುವ ಮೂಲಕ ಹೆತ್ತವರ ಹೆಸರನ್ನು ಚಿರಸ್ಥಾಯಿಯಾಗಿಸುವ ಸಂಕಲ್ಪ ಸಾಕಾರಗೊಳಿಸುವ ಯೋಜನೆಯಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…