ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು.
ಈ ಸಂದರ್ಭ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು.ಈ ಕುರಿತು ಎನ್‌ಎಸ್‌ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್‌ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…