ಉಡುಪಿ : ಯಶ್ ಪಾಲ್ ಸುವರ್ಣ ರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಜನ ಸಾಮಾನ್ಯರ ಸೇವೆಗೆ ಅವಕಾಶ ನೀಡಿ : ಪ್ರಮೋದ್ ಮಧ್ವರಾಜ್ – Vishwanews24

Featured, ಉಡುಪಿ

ಉಡುಪಿ : ಯಶ್ ಪಾಲ್ ಸುವರ್ಣ ರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಜನ ಸಾಮಾನ್ಯರ ಸೇವೆಗೆ ಅವಕಾಶ ನೀಡಿ : ಪ್ರಮೋದ್ ಮಧ್ವರಾಜ್

ಉಡುಪಿ: ಸಿದ್ದಾಂತದೊಂದಿಗೆ ರಾಜಿಯಾಗದ ದಿಟ್ಟ ನಿಲುವಿನೊಂದಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿ ತಳ ಮಟ್ಟದಿಂದ ಪಕ್ಷ ಸಂಘಟಿಸಿ ಇದೀಗ ಬಿಜೆಪಿ ಪಕ್ಷದ ಸಮರ್ಥ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಯುವ ನಾಯಕ ಯಶ್ ಪಾಲ್ ಸುವರ್ಣ ರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಜನ ಸಾಮಾನ್ಯರ ಸೇವೆಗೆ ಅವಕಾಶ ನೀಡುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮಲ್ಪೆ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾಗಿ , ನಗರ ಸಭೆಯ ಅನುಭವಿ ಸದಸ್ಯರಾಗಿ, ಸಹಕಾರಿ, ಶಿಕ್ಷಣ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಕಾರ್ಯವೈಖರಿಯಿಂದ ಓರ್ವ ದಕ್ಷ ಆಡಳಿತಗಾರರಾಗಿ ಗುರುತಿಸಿ ಕೊಂಡಿರುವ ಯಶ್ ಪಾಲ್ ಸುವರ್ಣ ಮುಂದಿನ ದಿನದಲ್ಲಿ ಓರ್ವ ಯಶಸ್ವಿ ಶಾಸಕರಾಗಿ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ವಿಧಾನ ಸಭೆಯಲ್ಲಿ ಗಟ್ಟಿ ಧ್ವನಿಯಾಗುವ ಮೂಲಕ ಉಡುಪಿ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ. ಕಳೆದ 20 ವರ್ಷಗಳಲ್ಲಿ ಶಾಸಕ ರಘುಪತಿ ಭಟ್ ಹಾಗೂ ನನ್ನ ಅವಧಿಯಲ್ಲಿ ಉಡುಪಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶ್ ಪಾಲ್ ಸುವರ್ಣ ಇನ್ನೂ ಉತ್ತಮ ರೀತಿಯಲ್ಲಿ ಮಂದುವರೆಸುವ ಭರವಸೆ ಇದೆ ಎಂದರು.

ಉಚ್ಚಿಲ ಬಡಾ ಗ್ರಾಮದಲ್ಲಿ ವಿನಯ ಕುಮಾರ್ ಸೊರಕೆ ಸಮ್ಮುಖದಲ್ಲಿ ಕರಾವಳಿ ಭಾಗದ 300ರಕ್ಕೂ ಅಧಿಕ ಮೀನುಗಾರರು ಕಾಂಗ್ರೆಸ್ ಸೇರ್ಪಡೆ – Vishwanews24

ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮಾತನಾಡಿ ಪಕ್ಷ ನನ್ನಂತಹ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡಿದೆ. ಕರಾವಳಿ ಭಾಗದ ಭಜನಾ ಮಂದಿರ ಸುಸಂಸ್ಕೃತ ಸಮಾಜ ನಿರ್ಮಿಸುವಲ್ಲಿ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದೆ. ಈ ಭಜನಾ ಮಂದಿರಗಳೊಂದಿಗೆ ಹಲವು ವರ್ಷಗಳಿಂದ ನಿಕಟ ಸಂಬಂಧ ಹೊಂದಿದ್ದು ಈ ಬಾರಿಯ ಚುನವಣೆಯಲ್ಲಿ ರಾಷ್ಟ್ರೀಯವಾದಿ ಚಿಂತನೆಯ ಮೂಲಕ ಜನಪರ ಆಡಳಿತಕ್ಕೆ ಬಿಜೆಪಿ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಉಡುಪಿ ಕ್ಷೇತ್ರದಲ್ಲಿ ತನನ್ನು ಗೆಲ್ಲಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ಈ ಸುಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರದ ಮೂಲಕ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಯೋಜನೆಗಳನ್ನು ಜಾರಿಗೆ ತರಲು ಕ್ಷೇತ್ರದ ಜನತೆಯ ಸೇವಕನಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಮಂಗಳೂರಿನತ್ತ ಪ್ರಧಾನಿ – Vishwanews24

Leave a Reply