ಉಡುಪಿ: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು. ಆದಾದ ಬಳಿಕವೇ ಕಾಮಗಾರಿಗೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು.
ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಆತ್ರಾಡಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಯಾವುದೇ ಸರಕಾರಿ ಕಚೇರಿಗಳಿಗೆ ಹೋಗಬೇಕಾದ್ರೂ ದಲ್ಲಾಳಿಗಳ ಮೂಲಕವೇ ವ್ಯವಹರಿಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ. ಉತ್ಸವಗಳನ್ನು ಮಾಡುವ ಮೂಲಕ ಜನರ ತೆರಿಗೆಯ ಹಣವನ್ನು ಲೂಟಿ ಹೊಡೆಯುವ ಕಾರ್ಯ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗೀಯ ಉಸ್ತುವಾರಿ ರೋಝಿ ಜಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಮುಖಂಡರಾದ ಇಸ್ಮಾಯಿಲ್ ಆತ್ರಾಡಿ, ಹರೀಶ್ ಹೆಗ್ಡೆ, ಗೀತಾ ವಾಗ್ಳೆ, ಬಾಬಣ್ಣ ನಾಯಕ್, ನವೀನ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಸುಧೀರ್ ಪಟ್ಲ ಸ್ವಾಗತಿಸಿದರು. ಲಕ್ಷ್ಮೀನಾರಾಯಣ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…