Featured

ಉಡುಪಿ : ಯುವಕ ಆತ್ಮಹತ್ಯೆ – vishwanews24

ಉಡುಪಿ : ಪ್ರಿಯತಮೆಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕ ಆತ್ಮಹತ್ಯೆ

ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕ ಕ್ಷಣಾರ್ಧದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ ರಂಜಿತ್ (28) ಮೃತರು.

ಜ.29ರಂದು ರಂಜಿತ್ ಅವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿದ್ದರು. ಅನಂತರ ತಾನು ಪ್ರೀತಿಸುತ್ತಿದ್ದ ಹುಡುಗಿ ಪ್ರೀತಿ ಎಂಬವರ ಜತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿದ್ದಾರೆ. ರಾತ್ರಿ ವೇಳೆ ಮನೆಯ ವಾಟರ್ ಟ್ಯಾಂಕಿನ ನೀರು ತುಂಬಿ ಕೆಳಗೆ ಬೀಳುತ್ತಿದ್ದುದರಿಂದ ಅವರ ತಂದೆ ವಾಟರ್ ಟ್ಯಾಂಕಿನ ವಾಲ್ ನ್ನು ಆಫ್ ಮಾಡಲು ಹೋಗುವಾಗ ರಂಜಿತ್ ಅವರ ರೂಮಿನ ಕಿಟಕಿ ತೆರೆದು ನೋಡಿದ್ದಾರೆ. ಈ ವೇಳೆ ಆತ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೇ ಆತನನ್ನು ಕೆಳಗೆ ಇಳಿಸಿ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯರು ಆತನಿಗೆ 20 ನಿಮಿಷ ಶೂಶ್ರುಷೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಸಾವಿನಲ್ಲಿ ಸಂಶಯವಿರುವುದಾಗಿ ಆತನ ಅಣ್ಣ ರಕ್ಷಿತ್ ಅವರು ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

3 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

3 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

4 hours ago