Featured

ಉಡುಪಿ : ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಫೆಬ್ರವರಿ ಮೊದಲ ವಾರದಲ್ಲಿ ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ – vishwanews24

ಉಡುಪಿ : ಫೆಬ್ರವರಿ ಮೊದಲನೇ ವಾರದಲ್ಲಿ ಬೃಹತ್ ಉದ್ಯೋಗ ಮೇಳ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ನಗರದಲ್ಲಿ ಬೃಹತ್‌ ಕೌಶಲ ರೋಜ್‌ಗಾರ್‌ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ಕೌಶಲ ರೋಜ್‌ಗಾರ್‌ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವ ಜನರಿಗೆ ಉದ್ಯೋಗ ಒದಗಿಸುವ ಬೃಹತ್‌ ಉದ್ಯೋಗ ಮೇಳವು ಅಜ್ಜರಕಾಡು ಡಾ| ಜಿ. ಶಂಕರ್‌ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ರಾಜ್ಯ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪೆನಿಗಳ 100ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಲಿದ್ದು, 3,500ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಆಗಮಿಸುವ ನಿರೀಕ್ಷೆಯಲಿದೆ. ಇದಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

 

ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ -ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು. ಮೇಳದಲ್ಲಿ ಭಾಗವಹಿಸುವ ಉದ್ಯೋಗ ಆಕಾಂಕ್ಷಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ನೋಂದಣಿಗೆ ವೆಬ್‌ಸೈಟ್‌ ಶೀಘ್ರದಲ್ಲಿ ರಚಿಸಿ, ನೋಂದಣಿಗೆ ಅನುವು ಮಾಡಿಕೊಡಬೇಕು ಎಂದರು.

ಜಿಪಂ ಯೋಜನ ನಿರ್ದೇಶಕ ಶ್ರೀನಿವಾಸ್‌ ರಾವ್‌, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ್‌, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್‌ ಕುಂದರ್‌, ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌ನ ಮುಖ್ಯಸ್ಥರು, ವಿವಿಧ ಕಾಲೇಜುಗಳ ಪ್ರತಿನಿ ಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago