ಉಡುಪಿ

ಉಡುಪಿ:  ಯುವತಿಯ ಅತ್ಯಾಚಾರ ಕೊಲೆ ಬೆದರಿಕೆ ಪ್ರಕರಣ ; ಹಿಂಜಾವೇ ಕಾರ್ಯಕರ್ತನ ಬಂಧನ – vishwanews24

ಉಡುಪಿ:  ಯುವತಿಯ ಅತ್ಯಾಚಾರ ಕೊಲೆ ಬೆದರಿಕೆ ಪ್ರಕರಣ ; ಹಿಂಜಾವೇ ಕಾರ್ಯಕರ್ತನ ಬಂಧನ

ಉಡುಪಿ: ಹಿಂದೂ ಸಂಘಟನೆಯ ಮುಖಂಡನೊರ್ವ ಮದುವೆಗೆ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದು ಕೊಲೆ ಬೆದರಿಕೆ ಹಾಕಿದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಪೆರ್ಡೂರಿನ ಹಿಂದೂ ಸಂಘಟನೆಯೊಂದರ ನಾಯರ್‌ಕೋಡು ಘಟಕದ ಕಾರ್ಯಕರ್ತ ಪ್ರದೀಪ್ ಪೂಜಾರಿ(26) ಎಂದು ಗುರುತಿಸಲಾಗಿದೆ.

ಪ್ರದೀಪ್ ಪೂಜಾರಿ ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಮದುವೆ ಆಗುವಂತೆ ಒತ್ತಾಯಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದಕ್ಕೆ ಆಕೆಯ ಕತ್ತು ಹಿಸುಕಿ ಬೆದರಿಸಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಯುವತಿ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಹಾಡಿಯಲ್ಲಿ ಹಿಂಬಲಿಸಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಳಿಕ ಅಲ್ಲಿಂದ ತಪ್ಪಿಸಿಕೊಂಡ ಆಕೆ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದು, ಪೋಷಕರು ಯುವಕನ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಆರೋಪಿ ಪ್ರದೀಪ್ ಪೂಜಾರಿಯನ್ನು ಬಂಧಿಸಿದ ಉಡುಪಿ ಮಹಿಳಾ ಠಾಣಾ ಪೊಲೀಸರು, ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿ ಪ್ರದೀಪ್‌ನನ್ನು ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago