ಉಡುಪಿ

ಉಡುಪಿ: ಯುವತಿ ಗಡಿಪಾರಿಗೆ ಕೋರ್ಟ್ ಆದೇಶ

ಉಡುಪಿ (ಮೇ.22): ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ನೈಜೀರಿಯಾ ದೇಶದ ವಿದ್ಯಾರ್ಥಿನಿಯನ್ನು ಗಡಿಪಾರು ಮಾಡುವಂತೆ ಉಡುಪಿ ನ್ಯಾಯಾಲಯದ ಆದೇಶಿಸಿದೆ.
ನೈಜೀರಿಯಾ ದೇಶದ ಉಯು ಎನ್ಸಾ ಜೆರಿ ಡೇವಿಸ್ ಎಂಬಾಕೆ ಗಡಿಪಾರಾದ ಯುವತಿ. ಈಕೆ 2011ರಿಂದ ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಬಿಎ ಎಲ್ಎಲ್ ಬಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ವೀಸಾ ಅವಧಿಯು 2012ರ ಜೂ.14ಕ್ಕೆ ಮುಕ್ತಾಯವಾಗಿತ್ತು, ಅನಂತರ ಆಕೆ ತನ್ನ ವೀಸಾವನ್ನು ವಿದೇಶಿಯರ ನೋಂದಣಾಧಿಕಾರಿಯವರ ಕಚೇರಿಯಲ್ಲಿ 2015ರ ಡಿ.27ರವರೆಗೆ ವಿಸ್ತರಣೆ ಮಾಡಿ ಕೊಂಡಿದ್ದರು. ನಂತರ ಆಕೆ ವಾಸ ವಿಸ್ತರಣೆ ಕುರಿತು ಅರ್ಜಿ ಸಲ್ಲಿಸದೆ ಭಾರತದಲ್ಲಿ ಅನಧಿಕೃತವಾಗಿ ವಾಸವಾಗಿದ್ದರು.
ಈ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿ 2018ರ ಎ.30ರಂದು ಆಕೆಯನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ವಿಚಾರಣೆ ನಡೆಸಿ ಆಕೆಗೆ ಎ.30ರಿಂದ ಮೇ 11ರವರೆಗೆ ಸಾದಾ ಶಿಕ್ಷೆ ಹಾಗೂ 10,000ರೂ. ದಂಡ ವಿಧಿಸಿ ಆಕೆಯನ್ನು ಭಾರತದಿಂದ ನೈಜೀರಿಯ ದೇಶಕ್ಕೆ ಗಡಿಪಾರು ಮಾಡುವಂತೆ ಆದೇಶ ನೀಡಿತ್ತು.
ಈ ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ನಿರ್ದೇಶನದಂತೆ ಮಣಿಪಾಲ ಪೊಲೀಸ್ ನಿರೀಕ್ಷಕರು ತನಿಖೆ ನಡೆಸಿ, ಉಯು ಎನ್ಸಾ ಜೆರಿ ಡೇವಿಸ್ಳನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಆಕೆಯನ್ನು ಭಾರತದಿಂದ ಆಕೆಯ ಮಾತೃ ದೇಶಕ್ಕೆ ಗಡಿಪಾರು ಮಾಡಿದೆ.
Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago