ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆಯ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ.ಗಳನ್ನು ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯಾಗಿ ನೀಡಲಾಗುತ್ತದೆ. ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನೊಂದಣಿಗೆ ಅಗತ್ಯವಿರುವ ದಾಖಲೆಗಳೊಂದಿಗೆ ಹೆಸರನ್ನು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in- ನಲ್ಲಿ ನೋಂದಾಯಿಸಿಕೊಳ್ಳಬಹುದು.ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ ಎಂಬುದನ್ನು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…