ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣ ಮಾಡಿಕೊಳ್ಳಬಹುದಾಗಿದೆ.
೨೦೨೨-೨೩ ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ ೩,೦೦೦ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.೧,೫೦೦ ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ : ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ ೨೫ ನೇ ತಾರೀಕಿನ ಒಳಗಾಗಿ ಆನ್‌ಲೈನ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ಬಿ. ಬ್ಲಾಕ್, ಮೊದಲನೆ ಮಹಡಿ, ರಜತಾದ್ರಿ, ಮಣ ಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…