Featured

ಉಡುಪಿ: ಯುವನಿಧಿ – ವಿಶೇಷ ನೋಂದಣಿ ಅಭಿಯಾನ – vishwanews24

ಉಡುಪಿ: ಯುವನಿಧಿ – ವಿಶೇಷ ನೋಂದಣಿ ಅಭಿಯಾನ

    ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂ.ನಂ. 201 ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇಲ್ಲಿ ಅಯೋಜಿಸಲಾಗಿದೆ

  ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದ್ದು, ಆಯಾ ತಾಲೂಕಿನ ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು. ಪ್ರತಿ ತಿಂಗಳು ಪದವಿಧರರಿಗೆ 3,000 ರೂ. ಹಾಗೂ ಡಿಪ್ಲೋಮಾದಾರರಿಗೆ 1,500 ರೂ. ಗಳನ್ನು ನಿರುದ್ಯೋಗ ಭತ್ಯೆಯ ಮೂಲಕ ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

  ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: 2024-25 ರಲ್ಲಿ ಪದವಿ/ಡಿಪ್ಲೋಮಾ ಹಾಗೂ ಸ್ನಾತಕೋತರ ಉತ್ತಿರ್ಣರಾದ ವಿಧ್ಯಾರ್ಥಿಗಳು, ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯೊಳಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿಧ್ಯಾಭ್ಯಾಸ ಮುಂದುವರೆಸದೆ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿರುವರು (ಕನಿಷ್ಠ 6 ವರ್ಷಗಳ ವರೆಗೆ ಪದವಿ/ಡಿಪ್ಲೋಮಾ ದವರೆಗೆ ಅಧ್ಯಯನ ಮಾಡಿದವರು) ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.

  ಅಭ್ಯರ್ಥಿಗಳು ಪ್ರತಿ ತಿಂಗಳು ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಉದ್ಯೋಗಿಯಲ್ಲ ವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಲಭ್ಯವಿದ್ದು, ಅಭ್ಯರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆಯನ್ನು ಪ್ರತೀ ತಿಂಗಳು 25ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಪ್ರತೀ  ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್ ಸಂದೇಶ ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು

   ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ hಣಣಠಿs://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ, ಯುವನಿಧಿ ಯೋಜನೆಯ ಟೋಲ್ ಪ್ರೀ ಸಹಾಯವಾಣಿ ಸಂಖ್ಯೆ 18005999918 ಅಥವಾ 18005997154 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮೊ.ನಂ: 9945856670, 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago