Featured

ಉಡುಪಿ : ಯುವ ಜನತೆಯನ್ನು ಯಶಸ್ವಿ ಸ್ವ ಉದ್ಯೋಗಿಗಳನ್ನಾಗಿ ಮಾಡಿ : ಅಪರ ಜಿಲ್ಲಾಧಿಕಾರಿ -Vishwanews24

ಉಡುಪಿ : ಯುವ ಜನತೆಯನ್ನು ಯಶಸ್ವಿ ಸ್ವ ಉದ್ಯೋಗಿಗಳನ್ನಾಗಿ ಮಾಡಿ : ಅಪರ ಜಿಲ್ಲಾಧಿಕಾರಿ -Vishwanews24

ಉಡುಪಿ : ಜಿಲ್ಲೆಯ ಯುವ ಜನತೆ ತಮ್ಮ ಪದವಿ ವಿದ್ಯಾಭ್ಯಾಸದ ನಂತರ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗುವ ಕುರಿತಂತೆ ಕಾಲೇಜುಗಳಲ್ಲಿ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ನೆಹರು ಯುವ ಕೇಂ್ರದದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವ ಜನರು ಪದವಿ ನಂತರ ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲು ಅವಕಾಶ ನೀಡದಂತೆ, ಅವರು ಪದವಿ ಅಂತಿಮ ವರ್ಷದಲ್ಲಿ ಇರುವಾಗಲೇ, ಪದವಿ ನಂತರ ಅವರು ಕೈಗೊಳ್ಳಬಹುದಾದ ಸ್ವ ಉದ್ಯೋಗಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಎಲ್ಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಿ, ಈ ಕಾರ್ಯಕ್ರಮಗಳಿಗೆ ಲೀಡ್‌ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ವಿವಿಧ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳು ನೀಡುವ ವಿವಿಧ ಬಗೆಯ ಸಾಲಗಳು, ಸಬ್ಸಿಡಿ ಮೊತ್ತ ಮುಂತಾದವುಗಳ ಬಗ್ಗೆ ಸಮಗ್ರ ವಿವರಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಎಂದರು.

ಬ್ಯಾಂಕುಗಳು ಮಾತ್ರವಲ್ಲದೇ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಯುವಜನತೆಗೆ ಉದ್ಯೋಗ ಪ್ರಾರಂಭಿಸಲು ಇರುವ ಯೋಜನೆಗಳ ಕುರಿತಂತೆ ಸಂಬoಧಪಟ್ಟ ಅಧಿಕಾರಿಗಳಿಂದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿ ಆ ಮೂಲಕ ಜಿಲ್ಲೆಯ ಯುವಜನತೆ ಸ್ವ ಉದ್ಯೋಗ ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಅಭಿವೃದ್ದಿ ಹೊಂದುವAತೆ ಯೋಜನೆ ರೂಪಿಸಿ, ಕೇಂದ್ರ ಸರ್ಕಾರ ಸ್ಟಾರ್ಟ್ಅಪ್‌ಗಳನ್ನು ಆರಂಭಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಈ ಬಗ್ಗೆ ಮಾಹಿತಿ ನೀಡಿ, ಆತ್ಮ ನಿರ್ಭರ ಯೋಜನೆಯಡಿ ಸಹ ಅನೇಕ ಉದ್ದಿಮೆ ಆರಂಭಿಸಲು ಅವಕಾಶಗಳಿದ್ದು ಈ ಬಗ್ಗೆಯೂ ಯುವ ಜನತೆಗೆ ಮಾಹಿತಿ ನೀಡಿ ಎಂದರು.

ಜಿಲ್ಲೆಯ ಯುವ ಶಕ್ತಿ, ಜಿಲ್ಲೆಯ ಅಭಿವೃದ್ದಿಗೆ ಸಮರ್ಪಕವಾಗಿ ಬಳಕೆಯಾಗುವ ಕುರಿತಂತೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಯೋಜನೆಗಳನ್ನು ರೂಪಿಸಿ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನೆರವಾಗುವ ಕುರಿತಂತೆ ಯುವ ಜನತೆಗೆ ಮತ್ತು ಯುವ ಸಂಘಗಳಿಗೆ ತರಬೇತಿ ನೀಡಿ, ಗಾಂಧೀ ಜಯಂತಿಯoದು ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಯುವ ಜನತೆಯಿಂದ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಿ, ಜಲಶಕ್ತಿ ಅಭಿಯಾನ, ನಶಾ ಮುಕ್ತ ಭಾರತ ಮುಂತಾದ ಕಾರ್ಯಕ್ರಮಗಳಲ್ಲಿ ಯುವಜನತೆಯನ್ನು ಸೇರ್ಪಡೆ ಮಾಡಿಕೊಳ್ಳಿ ಎಂದು ಸದಾಶಿವ ಪ್ರಭು ಹೇಳಿದರು.

ಜಿಲ್ಲೆಯ ಯುವಕ ಸಂಘಗಳು ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ನೆರವಾಗಿದ್ದು, ಮಾಸ್ಕ್ಗಳ ವಿತರಣೆ, ಅಶಕ್ತರಿಗೆ ಆಹಾರ ವಿತರಣೆ ಕಾರ್ಯಕ್ರಮಗಳನ್ನು ನಡೆಸಿದ್ದು, ಸ್ವಯಂ ಸೇವಕರಾಗಿ ಸಹ ಹಲವು ಕಾರ್ಯಗಳನ್ನು ಮಾಡಿದ್ದಾರೆ. ಈಗಾಗಲೇ 180 ಮಂದಿಗೆ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ತರಬೇತಿ ನೀಡಿದ್ದು, ಇವರು ಯಾವುದೇ ಸಂದರ್ಭದಲ್ಲಿ ಜಿಲ್ಲಾಡಳಿತದ ನೆರವಿಗೆ ಸಿದ್ದರಾಗಿದ್ದಾರೆ. ಈ ಬಾರಿಯ ಕ್ರಿಯಾ ಯೋಜನೆಯಲ್ಲಿ ಆತ್ಮ ನಿರ್ಭರ ಯೋಜನೆಯ ಬಗ್ಗೆ, ಬ್ಯಾಂಕ್ ಮಿತ್ರರಾಗಿ ಕಾರ್ಯನಿರ್ವಹಿಸುವ ಬಗ್ಗೆ, ಗ್ರಾಮ ಸ್ವಚ್ಛತೆ, ಕೌಶಲ್ಯ ಮತ್ತು ಸಂವಹನ, ಫಿಟ್ ಇಂಡಿಯಾ ಕುರಿತ ವಿವಿಧ ತರಬೇತಿ ಮುಂತಾದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ವಿಲ್ಪೆçಡ್ ಡಿಸೋಜಾ ಹೇಳಿದರು.

ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಕ್ರಿಯಾ ಯೋಜನೆಯ ವಿವರ ನೀಡಿದರು.

ಸಭೆಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಯುವಕ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

21 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

21 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

22 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

22 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

22 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

22 hours ago