Featured

ಉಡುಪಿ : ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಬನ್ನಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ : ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಬನ್ನಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ, : ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಸೇರ್ಪಡೆಗೊಳ್ಳಬೆಕು, ಈ ಮೂಲಕ ಸಮಾಜದಲ್ಲಿ ತಮ್ಮ ಚಿಂತನೆಯ ಬದಲಾವಣೆಯನ್ನು ತರಬಹುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಹಯೋಗದಲ್ಲಿ ಶುಕ್ರವಾರ ಮಣಿಪಾಲ ರಜತಾದ್ರಿ ಸಭಾಂಗಣದಲ್ಲಿ ಆಯೋಜಿಸಿದ್ದ `ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ’ ಕುರಿತು ಹಮ್ಮಿಕೊಂಡ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ತರಬೇತಿ ಕಾರ್ಯಾಗಾರವನ್ನು ಆಫ್‌ಲೈನ್ ಮತ್ತು ಆನ್ ಲೈನ್ ಎರಡೂ ಮಾದರಿಯಲ್ಲಿ ನಡೆಸುವ ಚಿಂತನೆಯಿದ್ದು, ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೊದಲು ತಮ್ಮ ಬಗ್ಗೆ ತಾವೇ ಅರಿತಿರಬೇಕು,ಆಸಕ್ತಿಯಿರುವ ಕ್ಷೇತ್ರಗಳ ಬಗ್ಗೆ ತಿಳಿದಿರಬೇಕು. ಸಾಧನೆಯ ಹಾದಿಯಲ್ಲಿ ವೈಪಲ್ಯಗಳು ಎದುರಾದರೂ ಮುನ್ನೆಡೆದು ಗುರಿ ಸಾಧಿಸಬೇಕು , ಶ್ರಮ ಪಟ್ಟರೆ ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಹೇಳಿದರು
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಒಟ್ಟು ಜನಸಂಖ್ಯೆಯಲ್ಲಿ ಶೇ.1ರಷ್ಟು ಜನರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆ ಬರೆಯಲು ಮುಂದಾಗುತ್ತಿದ್ದಾರೆ. ಆಡಳಿತ ಸರಿ ಇಲ್ಲ ಎನ್ನುವ ಯುವಕರೇ ನಾಗರಿಕ ಸೇವೆಗೆ ಬಂದು ಸರಿಪಡಿಸುವ ಪ್ರಯತ್ನಕ್ಕೆ ಮುಂದಾಗಬೇಕು , ಸುಶಿಕ್ಷಿತರ ಜಿಲ್ಲೆಯಾದ ಉಡುಪಿಯಲ್ಲಿ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯತ್ತ ಒಲವು ತೋರಿಸುವವರ ಸಂಖ್ಯೆ ತುಂಬ ವಿರಳ. ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಯುಪಿಎಸ್ಸಿ ಪರೀಕ್ಷೆಗೆ ಒಂದು ಪ್ರದೇಶದಲ್ಲಿ ಕನಿಷ್ಠವೆಂದರು 10 ಅಭ್ಯರ್ಥಿಗಳು ತಯಾರಿ ನಡೆಸುತ್ತಾರೆ ಎಂದರು.

ಯುಪಿಎಸ್ಸಿ ರ‍್ಯಾಂಕ್ ಆಧಾರದ ಮೇಲೆ ಒಟ್ಟು 19 ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಸ್ಥಳೀಯ ಮಟ್ಟದಿಂದÀ ಅಂತಾರಾಷ್ಟ್ರೀಯ ಮಟ್ಟದವರೆಗಿನ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತ ಬಹುದಾಗಿದೆ. ವ್ಯವಸ್ಥೆಯನ್ನು ಬದಲಿಸಬೇಕು ಎನ್ನುವ ಹಂಬಲವಿರುವ ಯುವಜನರು ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ನಡೆಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿದರು.
ದ.ಕ. ಪ್ರೋಬೆಷನರಿ ಐಎಎಸ್ ಅಧಿಕಾರಿ ಎನ್.ಎಂ.ಎ. ಅಕ್ರಂ ಶಾ, ಕುದುರೆಮುಖ ವನ್ಯ ಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಅಜಿತ್ ಪಾಟೀಲ್ ತಮ್ಮ ಸಾದನೆಯ ಹಾದಿಯ ಬಗ್ಗೆ ವಿವರಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಉಡುಪಿ ಕೆಎಂಎಸ್ ಅಕ್ಷತಾ, ಜಿ.ಪಂ. ಯೋಜನಾಧಿಕಾರಿ ಬಾಬು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಡಾ| ರೋಶನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ನೆಹರೂ ಯುವ ಕೇಂದ್ರದ ವಿಲ್ಫ್ರೆಡ್ ಡಿ’ಸೋಜಾ ಸ್ವಾಗತಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago