ಉಡುಪಿ: ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಜಗದೀಶ್ -Vishwanews24

ಉಡುಪಿ: ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಜನವರಿ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳು ಮತ್ತು ಬೂತ್ ಗಳಲ್ಲಿ ಜಾಥಾ ಮತ್ತು ಪ್ರತಿಜ್ಞಾ ಬೋಧನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯುವ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾದವರ ಎಪಿಕ್ ಕಾರ್ಡನ್ನು ಮತದಾರರ ದಿನಾಚರಣೆಯಂದೇ ವಿತರಣೆ ಮಾಡಲು 50 ಜನ ಯುವ ಮತದಾರರನ್ನು ಗುರುತಿಸಲು ಹಾಗೂ ಜನವರಿ 24 ರಂದು ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಎಲ್ಲಾ ಕಡೆಯೂ ಬೋಧಿಸಲು ತಿಳಿಸಿದರು.

ಜನವರಿ 24 ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ಸಿಬ್ಬಂದಿಗಳೂ ಕಡ್ಡಾಯವಾಗಿ ಹಾಜರಿರಬೇಕು. ಜನವರಿ 25 ರಂದು ಉಡುಪಿ ಪುರಭವನದಲ್ಲಿ ನಡೆಯುವ ಮತದಾನ ದಿನಾಚರಣೆ ಕಾರ್ಯಕ್ರಮವನ್ನು ಕ್ಲಪ್ತ ಸಮಯಕ್ಕೆ ಪ್ರಾರಂಭಿಸಿ, ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು. ಎಲ್ಲಾ ಬೂತ್ಗಾಳಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಬ್ಯಾನರ್ಗತಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದ್ದು, ಮತದಾರರ ದಿನಾಚರಣೆಯಂದು ವಿಜೇತರಿಗೆ ಬಹುಮಾನವನ್ನು ನೀಡಲಾಗುವುದು. ಉತ್ತಮ ಇ.ಎಲ್.ಸಿ ಮತ್ತು ಸಿ.ಜೆ.ಸಿಗಳನ್ನು ಗೌರವಿಸಲಾಗುವುದು ಮತ್ತು ಅತಿಕ್ಲಿಷ್ಟಕರ ಸನ್ನಿವೇಶಗಳಲ್ಲಿಯೂ ಮತದಾನ ಮಾಡಿರುವ 100 ವಯಸ್ಸು ಮೇಲ್ಪಟ್ಟ ಮತದಾರರನ್ನು ಸನ್ಮಾನಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಲ್ಲಾ ತಾಲೂಕುಗಳ ತಹಶೀಲ್ದಾರರು ಯು.ಎಲ್.ಬಿ ಗಳ ಜೊತೆ ಸಮಾಲೋಚನೆ ನಡೆಸಬೇಕು ಮತ್ತು ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಲು ನಗರಸಭೆ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳು, ತಾಲೂಕು ತಹಶೀಲ್ದಾರ್ಗುಳು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago