Featured

ಉಡುಪಿ : ರಂಗ ವರ್ಣದಲ್ಲಿ ಕನಕ ಗೋಪುರ ಝಗಮಗ  -Vishwanews24

ಉಡುಪಿ : ರಂಗ ವರ್ಣದಲ್ಲಿ ಕನಕ ಗೋಪುರ ಝಗಮಗ

ಉಡುಪಿ: ಇಲ್ಲಿನ ರಥಬೀದಿಯ ಕನಕ ಗೋಪುರ ತ್ರಿವರ್ಣಗಳಿಂದ ಝಗಮಗಿಸುತ್ತಿದೆ. ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ವರ್ಣದಲ್ಲಿ ಶೋಭಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಮತ್ತು ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಕೃಷ್ಣ ಮಠದ ಕನಕ ಗೋಪುರ ತ್ರಿವರ್ಣದೊಂದಿಗೆ ಝಗಮಗಿಸುವಂತೆ ಮಾಡಲಾಗಿದ್ದು, ಶನಿವಾರದಿಂದ ಸೋಮವಾರ ವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರ ವರೆಗೆ ವಿಶೇಷ ವಿದ್ಯುದ್ದೀಪಗಳ ಶೃಂಗಾರದಿಂದ ಕಂಗೊಳಿಸಲಿದೆ.

ಕನಕ ಗೋಪುರದ ದೀಪಾಲಂಕಾರವನ್ನು ಶನಿವಾರ ಉದ್ಘಾಟಿಸಲಾಗಿದ್ದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಸ್ವಿಚ್ ಆನ್ ಮಾಡುವ ಮೂಲಕ ತ್ರಿವರ್ಣ ದೀಪಾಲಂಕಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ನಗರಸಭಾ ಸದಸ್ಯ ವಿಜಯ ಕೊಡವೂರು,  ರೋಟರಿ ಉಡುಪಿ ರಾಯಲ್ ಅಧ್ಯಕ್ಷ ಪ್ರೊ. ಬಾಲಕೃಷ್ಣ ಮದ್ದೋಡಿ,  ಕಾರ್ಯಕ್ರಮ ಸಂಚಾಲಕ ಆಸ್ಟ್ರೋ ಮೋಹನ್, ಉಪಾಧ್ಯಕ್ಷ ಪ್ರವೀಣ್ ಹೂಡೆ, ಕಸಾಪ ಉಡುಪಿ ತಾಲೂಕು ಘಟಕಾಧ್ಯಕ್ಪ ರವಿರಾಜ್ ಹೆಚ್.ಪಿ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಮೊದಲಾದವರಿದ್ದರು.

ಈಸಂದರ್ಭದಲ್ಲಿ ಮಾಜಿ ಯೋಧ ಕೃಷ್ಣ ಶೆಟ್ಟಿಬೆಟ್ಟು ಇವರನ್ನು ಅಭಿನಂದಿಸಲಾಯಿತು. ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿದರು. ದಿವಾಕರ್ ಹಿರಿಯಡ್ಕ ಧನ್ಯವಾದವಿತ್ತರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು
Vishwa News 24

Recent Posts

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

1 hour ago

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago