ಉಡುಪಿ : ಉಡುಪಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಬ್ಬದ ರೀತಿಯಲ್ಲಿ ಆಚರಿಸುವಂತೆ ಜಿಲ್ಲೆಯ ಜನತೆ ಹಾಗೂ ಸಂಘ ಸಂಸ್ಥೆಗಳಿಗೆ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು.
ಅವರು ಇಂದು ಉಡುಪಿ ರಜತ ಉತ್ಸವ ಆಚರಣೆ ಕುರಿತು ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಕೇಂದ್ರಕ್ಕೆ ಜನ ಸಾಮಾನ್ಯರು ಬಂದು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗಲು ಅನುಕೂಲವಾಗಲು ಉಡುಪಿ ಜಿಲ್ಲೆಯನ್ನು ರಚನೆ ಮಾಡಬೇಕೆಂಬ ಜನರ ಒತ್ತಾಸೆಯನ್ನು ಅರಿತು ಸರ್ಕಾರ ಉಡುಪಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿತ್ತು. ಪ್ರಸಕ್ತ ಮಾಹೆಯ 25 ಕ್ಕೆ 25 ವರ್ಷಗಳು ತುಂಬುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯು ಇದುವರೆಗೆ ಬೆಳದು ಬಂದಿರುವ ಹಾದಿ ಮತ್ತು ಇನ್ನೂ ಗಳಿಸಬೇಕಿರುವ ಅಭಿವೃಧ್ದಿಯ ಬಗ್ಗೆ ಅವಲೋಕನ ಮಾಡಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪೂರಕವಾಗಲಿದೆ , ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ವೇದಿಕೆ ಕಾರ್ಯಕ್ರಮವು ಆಗಸ್ಟ್ 25 ರಂದು ಅಜ್ಜರಕಾಡು ನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಚಿವ ಸಂಪುಟದ ವಿವಿಧ ಸಚಿವರುಗಳು ಸಹ ಆಗಮಿಸಲಿದ್ದಾರೆ ಎಂದರು.
ರಜತ ಮಹೋತ್ಸವದ ಅಂಗವಾಗಿ ಉಡುಪಿಯ ಬೋರ್ಡ್ ಶಾಲೆಯಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ ಆಯೋಜಿಸುವಂತೆ ತಿಳಿಸಿದ ಅವರು, ಈ ಎಲ್ಲಾ ಕಾರ್ಯಕ್ರಮಗಳ ಕುರಿತು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಅಗಸ್ಟ್ 21 – ಯುವವಾಹಿನಿ ಅಂತರ್ ಘಟಕದ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭ : vishwanews24
ಆಗಸ್ಟ್ 24 ರಿಂದ ನೇಷನ್ ಫಸ್ಟ್ ತಂಡ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲೆಯಾದ್ಯಂತ 75 ಕಿ.ಮೀ.ಗಳ ಓಟದ ಕಾರ್ಯಕ್ರಮ ನಡೆಯಲಿದೆ ಎಂದರು.
ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಜಿಲ್ಲೆಯ ಆರಂಭದ ದಿನಗಳಿಂದ ಇದುವರೆಗಿನ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದರು.
ಉತ್ಸವದ ಯಶಸ್ವಿ ಆಚರಣೆ ಕುರಿತು ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಗಳನ್ನು ಪರಸ್ಪರ ಸಮನ್ವಯದಿಂದ ನಿಭಾಯಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ.ಸಿಇಓ ಪ್ರಸನ್ನ ಹೆಚ್. ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಕ್ಷಯ್ ಹಾಕೆ ಮಚೀಂದ್ರ , ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…