ಉಡುಪಿ: ರಮಿತಾ ಶೈಲೇಂದ್ರ ರಾವ್ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ -Vishwanews24
ಉಡುಪಿ: ರಮಿತಾ ಶೈಲೇಂದ್ರ ರಾವ್ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ -Vishwanews24
ಉಡುಪಿ: ರಾಜ್ಯ ಸರಕಾರವು ಮಹಿಳಾ ಅಭಿವೃದ್ಧಿ ಹಾಗೂ ಸಬಲೀಕರಣಕ್ಕೆ ಶ್ರಮಿಸಿದ ಮಹಿಳೆಯರಿಗೆ ಕೊಡಮಾಡುವ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಯನ್ನು ರಮಿತಾ ಶೈಲೇಂದ್ರ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರದಾನಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ,ಮಹಿಳಾ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರ ಸಮ್ಮುಖದಲ್ಲಿ ರಮಿತಾ ಪ್ರಶಸ್ತಿ ಸ್ವೀಕರಿಸಿದರು.
ಅವರು ಪ್ರಸ್ತುತ ಕಾರ್ಕಳ ರೋಟರಿ ಆನ್ಸ್ ಸಂಸ್ಥೆಯ ಅಧ್ಯಕ್ಷೆಯಾಗಿದ್ದು, 500ಕ್ಕೂ ಹೆಚ್ಚಿನ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ಈ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ.
