ಉಡುಪಿ: ನೈಜ ವಿಷಯ ಮರೆಮಾಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕನಾಗಿದ್ದು ತಾರೀಕು. 24/12/2024ರಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿಯ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದುಕೊಂಡಾಗ ಕಾಂಚನ್ ಅವರು ಯಾವುದೇ ಧರ್ಮಕ್ಕೆ ಅಥವ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿರುವುದಿಲ್ಲ. ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿರುವುದಾಗಿ ತಿಳಿಸಿದ್ದು ಆದರೆ ಒಬ್ಬ ವ್ಯಕ್ತಿ ನಾನು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುತ್ತಾನೆ.
ನಾನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಿ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿರುತ್ತಾನೆ. ಹಾಗೆಯೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಆ ಮೂಲಕ ಪ್ರಯತ್ನಿಸಿರುತ್ತಾನೆ.ಅದರಿಂದ ಈ ಸುಳ್ಳು ಸುದ್ದಿ ಹಬ್ಬಿಸುವ ಆ ವ್ಯಕ್ತಿಗೆ ಎಚ್ಚರಿಕೆ ನೀಡಿ ಸರಿಯಾದ ಕಾನೂನು ಕ್ರಮ ಕೈಗೊಳ್ಳ ಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…