Featured

ಉಡುಪಿ:  ರಮೇಶ್ ಕಾಂಚನ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ; ದೂರು ದಾಖಲು – vishwanews24

ಉಡುಪಿ:  ರಮೇಶ್ ಕಾಂಚನ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ; ದೂರು ದಾಖಲು

ಉಡುಪಿ: ನೈಜ ವಿಷಯ ಮರೆಮಾಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ

ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕನಾಗಿದ್ದು ತಾರೀಕು. 24/12/2024ರಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿಯ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದುಕೊಂಡಾಗ ಕಾಂಚನ್ ಅವರು ಯಾವುದೇ ಧರ್ಮಕ್ಕೆ ಅಥವ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿರುವುದಿಲ್ಲ. ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿರುವುದಾಗಿ ತಿಳಿಸಿದ್ದು ಆದರೆ ಒಬ್ಬ ವ್ಯಕ್ತಿ ನಾನು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುತ್ತಾನೆ.

ನಾನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಿ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿರುತ್ತಾನೆ. ಹಾಗೆಯೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಆ ಮೂಲಕ ಪ್ರಯತ್ನಿಸಿರುತ್ತಾನೆ.ಅದರಿಂದ ಈ ಸುಳ್ಳು ಸುದ್ದಿ ಹಬ್ಬಿಸುವ ಆ ವ್ಯಕ್ತಿಗೆ ಎಚ್ಚರಿಕೆ ನೀಡಿ ಸರಿಯಾದ ಕಾನೂನು ಕ್ರಮ ಕೈಗೊಳ್ಳ ಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago