ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿವಂಗತ ಪೊಲೀಸ್ ಕಾನ್ಸ್‌ಟೇಬಲ್ ಶ್ರೀ ಅರ್ಜುನ ಶಂಕರ ನೆಲ್ಲೂರ ರವರ ಅವಲಂಬಿತರಿಗೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1,45,00,000 ಮೊತ್ತದ ವಿಮಾ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಲಾಯಿತು.
2023-24ನೇ ಸಾಲಿನಲ್ಲಿ ಸಿ.ಎಸ್.ಪಿ. ಜಿಲ್ಲಾ ನಿಯಂತ್ರಣ ಕೊಠಡಿ, ಉಡುಪಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅರ್ಜುನ ನೆಲ್ಲೂರ ರವರು, ಹಾವೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು.
ಆ 04ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಸ್ ಬಿ ಐ ನ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗ ಅವರು ಪೊಲೀಸ್ ಅಧೀಕ್ಷಕರು ಹರಿರಾಂ ಶಂಕರ್ ಅವರ ಸಮ್ಮುಖದಲ್ಲಿ ಕುಟುಂಬದ ಸದಸ್ಯರ ವೈಯಕ್ತಿಕ ಅಪಘಾತ ವಿಮೆಯ ಚೆಕ್ಕನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಎಸ್.ಬಿ.ಐ.. ನ ಮುಖ್ಯ ವ್ಯವಸ್ಥಾಪಕ ಕೀಳಂಜೆ ಕೃಷ್ಣರಾಜ ಭಟ್, ಮಲ್ಪೆ ಶಾಖೆಯ ಮೆನೇಜರ್ ರಾಜೇಶ್ ಗಂಗೊಳ್ಳಿ,ಇತರ ಅಧಿಕಾರಿಗಳಾದ ಶ್ರೀನಿವಾಸ್, ಪ್ರಣವ್ ಪೈ, ತನ್ಮಯ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮೃತ ಪೇದೆಯವರ ಕುಟುಂಬಸ್ಥರು ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಯವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ದೊರಕಿದೆ. ಇಂಥ ವಿಮಾ ಯೋಜನೆಗಳು ಎಲ್ಲಾ ಎಸ್‌ಬಿಐ ಶಾಖೆಗಳಲ್ಲಿ ಲಭ್ಯವಿದ್ದು ಇದರ ಸದುಪಯೋಗವನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪಡೆದುಕೊಳ್ಳಬೇಕು ಎಂದು ಪ್ರಕಾಶ ಅಡಿಗ ಅವರು ವಿನಂತಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…