Featured

ಉಡುಪಿ : ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ : ಸುನೀಲ್ ಕುಮಾರ್ ವಾಗ್ದಾಳಿ – vishwanews24

ಉಡುಪಿ: ರಾಜ್ಯದಲ್ಲಿರುವುದು ದಪ್ಪ ಚರ್ಮದ, ಎಮ್ಮೆ ಚರ್ಮದ ಸರ್ಕಾರ

ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣ

ಉಡುಪಿ: ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.

ಉಡುಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳದಲ್ಲಿ ಸುನೀಲ್ ಕುಮಾರ್, ರಾಜ್ಯದಲ್ಲಿರುವುದು ದಪ್ಪ ಚರ್ಮದ ಎಮ್ಮೆ ಚರ್ಮದ ಸರ್ಕಾರ, ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರಕಾರ. 22 ಲಕ್ಷ ರೇಷನ್ ಕಾರ್ಡ್, 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಡಿದೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಆರ್ಭಟ ಮಾಡುತ್ತಿದೆ. ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತಿಲ್ಲ. ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಯಾವುದೇ ವಸ್ತುಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಟ್‌ಕಾಯಿನ್ ಜಾಲದಲ್ಲಿ ಮೊಹಮ್ಮದ್ ನಲಪಾಡ್ ಸಿಲುಕಿರುವ ಬಗ್ಗೆ ಮಾತನಾಡಿ, ಇದು 60 ಪರ್ಸೆಂಟ್ ಸರ್ಕಾರ. ಎಲ್ಲ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್‌ನ ಕಾರ್ಯಕರ್ತರು ಬ್ರೋಕರ್‌ಗಳಾಗಿದ್ದಾರೆ. ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿಟ್ ಕಾಯಿನ್‌ನಲ್ಲಿ ಸಿಲುಕಿದ್ದಾರೆ. ಆರಂಭದಲ್ಲೇ ತೀವ್ರ ವಿಚಾರಣೆ ಮಾಡದೆ ಇರುವುದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.

ಹಣ ಚುನಾವಣೆಗಾಗಿ ಹೈಕಮಾಂಡ್‌ಗೆ ಹೋಗಿದೆ ಎಂಬ ಕಾರಣಕ್ಕೆ ಸಾಫ್ಟ್ ಕಾರ್ನರ್ ತೋರಲಾಗಿದೆ. ಅಬಕಾರಿ ಇಲಾಖೆ ಹಣ ದೆಹಲಿ, ಮಹಾರಾಷ್ಟ್ರ ಮತ್ತು ಕೇಂದ್ರದ ಚುನಾವಣೆಗೆ ರವಾನೆಯಾಗಿದೆ. ಈ ಕಾರಣಕ್ಕೆ ತನಿಖೆಯನ್ನು ಬಹಳ ಮಂದಗತಿಯಲ್ಲಿ ಮಾಡುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

2 minutes ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

17 minutes ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

2 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

3 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

3 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

3 hours ago