Featured

ಉಡುಪಿ:  ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ:  ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ರಾಜ್ಯದ ಛಾಯಾಗ್ರಾಹಕರ ಬಹು ವರ್ಷಗಳ ಬೇಡಿಕೆಯಂತೆ ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಆರಂಭಿಸಿ ಛಾಯಾಗ್ರಾಹಕರ ವೃತ್ತಿಗೆ ಮಾನ್ಯತೆ ಒದಗಿಸಿ ಛಾಯಾಗ್ರಹಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಸ್ತುತ ಕರ್ನಾಟಕದಲ್ಲಿ ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಛಾಯಾಗ್ರಾಹಕರು ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಛಾಯಾಗ್ರಹಣವೆಂದರೆ ಇಂದು ಕೇವಲ ಕಲೆ ಅಥವಾ ವೃತ್ತಿಯಾಗಿಯೇ ಅಲ್ಲ, ಅದು ಸಂಸ್ಕೃತಿ ಸಂರಕ್ಷಣೆ, ಸಾಮಾಜಿಕ ಬದಲಾವಣೆ, ಶಿಕ್ಷಣ, ತಾಂತ್ರಿಕ ನೈಪುಣ್ಯವರ್ಧನೆ ಹಾಗೂ ಬದುಕು ಕಟ್ಟಿಕೊಳ್ಳುವ ಮಹತ್ವದ ಕ್ಷೇತ್ರವಾಗಿದೆ. ಛಾಯಾಗ್ರಾಹಕರು ಪತ್ರಿಕೋದ್ಯಮ, ಹಬ್ಬ-ಉತ್ಸವ, ವೈವಾಹಿಕ, ನೈಸರ್ಗಿಕ ಮತ್ತು ಸಾಂಸ್ಕೃತಿಕ ಛಾಯಾಗ್ರಹಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಛಾಯಾಗ್ರಹಣ ಕ್ಷೇತ್ರದಲ್ಲಿ ಭಾರೀ ಸಂಖ್ಯೆಯ ಪ್ರತಿಭಾವಂತರಿದ್ದರೂ, ನಮ್ಮ ರಾಜ್ಯದಲ್ಲಿ ಇನ್ನೂ ಸರಕಾರೀ ಮಾನ್ಯತೆ ಹೊಂದಿದ ಛಾಯಾಗ್ರಹಣ ಅಕಾಡೆಮಿ ಸ್ಥಾಪನೆಯಾಗಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಈಗಾಗಲೇ ಸರಕಾರದ ಆಶ್ರಯದಲ್ಲಿ ಛಾಯಾಗ್ರಹಣ ಅಕಾಡೆಮಿಯನ್ನು ಸ್ಥಾಪಿಸಲಾಗಿದ್ದು, ನಮ್ಮ ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪನೆಯು ಅತ್ಯಗತ್ಯವಾಗಿ ಬೇಕಾಗಿದೆ.

ಕರ್ನಾಟಕದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವ ಮೂಲಕ ರಾಜ್ಯದ ಛಾಯಾಗ್ರಾಹಕರ ವೃತ್ತಿಗೆ ಮಾನ್ಯತೆ, ಸಾಂಸ್ಕೃತಿಕ ಮತ್ತು ಇತಿಹಾಸಪೂರ್ವ ದಾಖಲೆಗಳ ಸಂರಕ್ಷಣೆ, ಛಾಯಾಗ್ರಾಹಕರಿಗೆ ತಾಂತ್ರಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು, ಹಿರಿಯ ಛಾಯಾಗ್ರಾಹಕರಿಗೆ ಪಿಂಚಣಿ, ವಿಮೆ, ಪ್ರಶಸ್ತಿ, ಪ್ರವಾಸೋದ್ಯಮ ಚಟುವಟಿಕೆಗೆ ಪ್ರೋತ್ಸಾಹ ಹಾಗೂ ಯುವ ಛಾಯಾಗ್ರಾಹಕರನ್ನು ಪ್ರೋತ್ಸಾಹಿಸುವ ಮೂಲಕ ಯುವಸಬಲೀಕರಣಕ್ಕೆ ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ಶಕ್ತಿ ನೀಡಬಹುದಾಗಿದೆ.

ಛಾಯಾಗ್ರಹಕರು ಸಮಾಜಕ್ಕೆ ನೀಡುತ್ತಿರುವ ಸೇವೆಗೆ ಸರಿಯಾದ ಗೌರವ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಛಾಯಾಗ್ರಹಣ ಅಕಾಡೆಮಿ ಸ್ಥಾಪನೆಯಾಗುವುದು ಅತ್ಯಂತ್ಯ ಅವಶ್ಯಕವಾಗಿದ್ದು ಕರ್ನಾಟಕದಲ್ಲಿ ರಾಜ್ಯಮಟ್ಟದ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವ ಬಗ್ಗೆ ಕ್ರಮ ವಹಿಸುವಂತೆ ರಾಜ್ಯದ ಸಮಸ್ತ ಛಾಯಾಗ್ರಾಹಕರ ಪರವಾಗಿ ಮನವಿ ಮಾಡುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago