ಉಡುಪಿ: ರಾಜ್ಯದಲ್ಲಿ ಬೀಳುಬಿದ್ದಿರುವ 15 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ‘ಹಡಿಲುಭೂಮಿ ಕೃಷಿ ಅಭಿಯಾನ’ ನಡೆದರೆ ಭೂಮಿ ಹಸನಾಗಲಿದೆ. ಉಡುಪಿಯ ಅಭಿಯಾನ ರಾಜ್ಯಕ್ಕೆ ವಿಸ್ತರಿಸಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಶನಿವಾರ ಕೇದಾರೋತ್ಥಾನ ಟ್ರಸ್ಟ್‌ನಿಂದ ಕಡೆಕಾರಿನಲ್ಲಿ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ‘ರಾಜ್ಯಕ್ಕೆ ಮಾದರಿ ಹಾಗೂ ಮಾರ್ಗದರ್ಶನ ಮಾಡುವ ಕೆಲಸವನ್ನು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ಮಾಡುತ್ತಿದೆ. ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ’ ಎಂದರು.
ಕೃಷಿಯಲ್ಲಿ ಹೆಚ್ಚು ರಾಸಾಯನಿಕ ಬಳಕೆಯಿಂದ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗೆ ಸರ್ಕಾರ ಸಾವಯವ ಕೃಷಿಗೆ ಪ್ರೋತ್ಸಾಹ ನೀಡಲು ₹500 ಕೋಟಿ ಮೀಸಲಿಟ್ಟಿದೆ. ರೈತರು ಸಾವಯವ ಕೃಷಿಯತ್ತ ಹೆಚ್ಚು ಆಸಕ್ತಿ ತೋರಬೇಕು ಎಂದರು.
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…