ಉಡುಪಿ: ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು. ಒಂದು ಕಡೆ ಆಮೀಷವೊಡ್ಡಿ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ ಅಂತಾರೆ. ಮತ್ತೊಂದು ಕಡೆ ಮತಾಂತರ ಮಾಡುತ್ತಿದ್ದ ಮಿಷನರಿ ಅವರನ್ನು ಬಂಧಿಸಿದ್ದಾರೆ ಎನ್ನುವ ಸುದ್ದಿಗಳು ವರದಿಯಾಗಿವೆ ಎಂದರು.
ಮತಾಂತರ ಮುಂದುವರಿದರೆ ಸಮಾಜದಲ್ಲಿ ದೊಡ್ಡ ಅಶಾಂತಿ, ಗೊಂದಲ ಉಂಟಾಗಬಹುದು. ಸರ್ಕಾರ ಬಲವಾದ ಕಾನೂನು ಜಾರಿಗೆ ತರುವ ಮೂಲಕ ಮತಾಂತರ ನಿರ್ಬಂಧ ಮಾಡಬೇಕು. ರಾಜ್ಯ ಸರ್ಕಾರ ಈ ವಿಷಯದ ಕುರಿತಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಹಿಂದೂ ಧರ್ಮವನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿವೆ. ನಾವು ಒತ್ತಾಯದ ಮತಾಂತರ ಮಾಡುವುದಿಲ್ಲ ಎಂದರೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ಎಗ್ಗಿಲ್ಲದೆ ರಾಜ್ಯದ ಎಲ್ಲ ಕಡೆ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯ ಕೇಳಿಬರುತ್ತಿದೆ.
ಆರ್ಥಿಕ ಪರಿಸ್ಥಿತಿ, ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಯನ್ನು ಇಟ್ಟುಕೊಂಡು ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ಮತಾಂತರದ ದಾಳ ಹೂಡುತ್ತಿವೆ. ಕಳೆದ ಒಂದು ತಿಂಗಳಿಂದ ರಾಜ್ಯದ ಎಲ್ಲ ಕಡೆ ಮತಾಂತರ ಕೇಂದ್ರ, ಪ್ರಾರ್ಥನಾ ಮಂದಿರದ ಮೇಲೆ ಹಿಂದೂ ಸಂಘಟನೆಗಳು ದಾಳಿ ಮಾಡುತ್ತಿವೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…