Featured

ಉಡುಪಿ: ರಾಜ್ಯಾದ್ಯಂತ ಸರಕಾರಿ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ : ಮಧು ಬಂಗಾರಪ್ಪ – vishwanews24

ಉಡುಪಿ: ರಾಜ್ಯಾದ್ಯಂತ ಸರಕಾರಿ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ: ಮಧು ಬಂಗಾರಪ್ಪ

ಉಡುಪಿ :ಹೊಸ ಶೈಕ್ಷಣಿಕ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯಾದ್ಯಂತ ಸರಕಾರಿ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಎಂಎಲ್‌ಸಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಧು ಮಾತನಾಡಿ, , ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕರ್ನಾಟಕದ 500 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲಾಗುವುದು. ಇದಕ್ಕಾಗಿ ಸಿಎಸ್ಆರ್ ನಿಧಿ ಸಂಗ್ರಹಿಸಲಾಗುತ್ತಿದೆ. ಆ ಜವಾಬ್ದಾರಿಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಹೊರಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಇನ್ನೂ 3000 ಕೆಪಿಎಸ್ ಶಾಲೆಗಳು ಕಾರ್ಯಾರಂಭ ಮಾಡಲಿವೆ ಎಂದರು.

ಈ ವರ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅವರ ಕಲ್ಯಾಣಕ್ಕಾಗಿ 20% ಗ್ರೇಸ್ ಅಂಕಗಳನ್ನು ನೀಡಲಾಗಿದೆ. ಇದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಯಾವುದೇ ಗ್ರೇಸ್‌ ಮಾರ್ಕ್‌ ಇರುವುದಿಲ್ಲ ಎಂದರು.

ಅಶೋಕ್ ಕುಮಾರ್ ಕೊಡವೂರು, ಮಂಜುನಾಥ ಭಂಡಾರಿ, ಎಂ ಎ ಗಫೂರ್, ಮಮತಾ ಗಟ್ಟಿ, ಕೆ ಜಯಪ್ರಕಾಶ್ ಹೆಗ್ಡೆ, ಕಿಶನ್ ಹೆಗ್ಡೆ, ಪಿ ಎಂ ಶಾಹಿದ್, ಪಿ ಎಂ ಮಹಮ್ಮದ್, ವೆರೋನಿಕಾ ಕರ್ನೇಲಿಯೋ, ಆಯನೂರು ಮಂಜುನಾಥ, ಕೆ ಕೆ ಮಂಜುನಾಥ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

12 hours ago