ಉಡುಪಿ: ರಾಜ್ಯೋತ್ಸವ ಪೆರೇಡ್ ಗೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ ಸ್ತಬ್ಧಚಿತ್ರವನ್ನು ನಿರಾಕರಣೆ ,ಮಾನವ ಕುಲಕ್ಕೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ರವರು ತಿಳಿಸಿದ್ದಾರೆ.
ನಾರಾಯಣ ಗುರುಗಳು ಮಾನವತೆಯ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾ ಮಾನವತಾವಾದಿ. ಅವರ ತತ್ವ ಆದರ್ಶಗಳು ಸಮಾಜದಲ್ಲಿ ಅಮೂಲಾಗ್ರ ಬದಲಾವಣೆ ತಂದಿದೆ. ಕೇಂದ್ರ ಸರಕಾರದ ಈ ನಿಲುವು ನಾರಾಯಣ ಗುರುಗಳನ್ನು ಹಾಗೂ ಅವರ ಚಿಂತನೆಗಳನ್ನು ಅಪಮಾನಿಸಿದೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ.
ಓರ್ವ ಸಮಾಜ ಸುಧಾರಕ, ಸಮಾಜದಲ್ಲಿರುವ ಅಸಮಾನತೆಯನ್ನು ತೊಡೆದುಹಾಕಿ ಎಲ್ಲರೂ ಸಮಾನವಾಗಿ ಬದುಕಲು ತನ್ನ ಜೀವ ಹಾಗೂ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಜ್ಯಾತ್ಯಾತೀತ ನಿಲುವು ಹೊಂದಿದ ಇವರು ಸರ್ವ ಜಾತಿ ಹಾಗೂ ಸರ್ವ ಧರ್ಮವನ್ನು ಪ್ರೀತಿಸುತ್ತಿದ್ದರು. ಸರ್ವ ಜಾತಿಯವರು ಗೌರವಿಸುವ ಒಂದೇ ಜಾತಿ, ಒಂದೇ ಮತ, ಒಂದೇ ಕುಲ, ನಾವೆಲ್ಲರೂ ಮನುಜರು ಎಂದು ಸರ್ವಕಾಲೀನ ಸಂದೇಶವನ್ನು ನೀಡಿ ಸಮಸ್ತರ ಮನ ಗೆದ್ದ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು 2022 ರಾಜ್ಯೋತ್ಸವ ಪೆರೇಡ್ ಗೆ ಅಳವಡಿಸಲು ಅವಕಾಶ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…